IPL 2024: 'ದೈತ್ಯ' ಕ್ರಿಸ್ ಗೇಯ್ಲ್ ದಾಖಲೆ ಮುರಿದ RCB ರನ್ ಮೆಷಿನ್ ವಿರಾಟ್ ಕೊಹ್ಲಿ!
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ ರ ಬಹುದೊಡ್ಡ ದಾಖಲೆಯನ್ನು ಮುರಿದಿದ್ದಾರೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ ರ ಬಹುದೊಡ್ಡ ದಾಖಲೆಯನ್ನು ಮುರಿದಿದ್ದಾರೆ.
ಹೌದು.. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಇದೇ ಪಂದ್ಯದಲ್ಲಿ ದೈತ್ಯ ಕ್ರಿಸ್ ಗೇಯ್ಲ್ ರ ಐಪಿಎಲ್ ದಾಖಲೆಯೊಂದನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಒಟ್ಟು ಸಿಕ್ಸರ್ ಸಿಡಿಸುವ ಮೂಲಕ ಗೇಯ್ಲ್ ರ ಗರಿಷ್ಠ ಸಿಕ್ಸರ್ ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಆ ಮೂಲಕ ಐಪಿಎಲ್ ನಲ್ಲಿ ಆರ್ ಸಿಬಿ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ 240 ಸಿಕ್ಸರ್ ಗಳನ್ನು ಸಿಡಿಸಿರುವ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. 239ಸಿಕ್ಸರ್ ಗಳನ್ನು ಸಿಡಿಸಿರುವ ಕ್ರಿಸ್ ಗೇಯ್ಲ್ 2ನೇ ಸ್ಥಾನದಲ್ಲಿದ್ದಾರೆ. 238 ಸಿಕ್ಸರ್ ಗಳೊಂದಿಗೆ ಎಬಿಡಿವಿಲಿಯರ್ಸ್ 3ನೇ ಸ್ಥಾನದಲ್ಲಿದ್ದು, 67 ಸಿಕ್ಸರ್ ಗಳನ್ನು ಸಿಡಿಸಿರುವ ಗ್ಲೇನ್ ಮ್ಯಾಕ್ಸ್ ವೆಲ್ 4 ಮತ್ತು 50 ಸಿಕ್ಸರ್ ಸಿಡಿಸಿರುವ ಫಾಪ್ ಡುಪ್ಲೆಸಿಸ್ 5ನೇ ಸ್ಥಾನದಲ್ಲಿದ್ದಾರೆ.
Most sixes for RCB in the IPL
240 - Virat Kohli
239 - Chris Gayle
238 - AB de Villiers
67 - Glenn Maxwell
50 - Faf du Plessis
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



