IPL 2024: RCB ವಿರುದ್ಧ ಗುಜರಾತ್ ಟೈಟಾನ್ಸ್ 147 ರನ್‌ಗಳಿಗೆ ಆಲೌಟ್! ಹ್ಯಾಟ್ರಿಕ್ ವಿಕೆಟ್ ಸಾಧನೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿದೆ.

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ RCB ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.
ಗುಜರಾತ್ ಪರ ಶಾರುಖ್ ಖಾನ್ 24 ಎಸೆತಗಳಲ್ಲಿ 37 ರನ್, ರಾಹುಲ್ ತೆವಾಟಿಯಾ 21 ಎಸೆತಗಳಲ್ಲಿ 35 ರನ್ ಗಳಿಸಿದರೆ, ಡೇವಿಡ್ ಮಿಲ್ನರ್ 20 ಎಸೆತಗಳಲ್ಲಿ 30 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 19.3 ಓವರ್‌ಗಳಲ್ಲಿ 147 ರನ್ ಗಳಿಸಿತು. ಸಾಯಿ ಸುದರ್ಶನ್ ಬದಲಿಗೆ ವಿಜಯ್ ಶಂಕರ್ ಪ್ರಭಾವಿ ಆಟಗಾರನಾಗಿ ಬಂದರು, ಆದರೆ ನಿರೀಕ್ಷಿತ ಆಟ ಪ್ರದರ್ಶನ ಸಾಧ್ಯವಾಗಲಿಲ್ಲ.
ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಮತ್ತು ವಿಜಕುಮಾರ್ ವಿಶಾಕ್ 2-2 ವಿಕೆಟ್ ಪಡೆದರೆ, ಕ್ಯಾಮರೂನ್ ಗ್ರೀನ್ ಮತ್ತು ಕರ್ಣ್ ಶರ್ಮಾ 1-1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



