ಐಪಿಎಲ್ 2024: ಗುಜರಾತ್ ವಿರುದ್ಧ RCB ಗೆಲುವು; ಪ್ಲೇ ಆಫ್ ಕನಸು ಜೀವಂತ
ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ RCB ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್, ಶಾರುಖ್ ಖಾನ್ 24 ಎಸೆತಗಳಲ್ಲಿ 37 ರನ್, ರಾಹುಲ್ ತೆವಾಟಿಯಾ 21 ಎಸೆತಗಳಲ್ಲಿ 35 ರನ್ ಗಳಿಸಿದರೆ, ಡೇವಿಡ್ ಮಿಲ್ನರ್ 20 ಎಸೆತಗಳಲ್ಲಿ 30 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 19.3 ಓವರ್‌ಗಳಲ್ಲಿ 147 ರನ್ ಸೇರಿಸಿತು.
ಗೆಲುವಿಗೆ 148 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ, ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 13. 4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು. ಇದರೊಂದಿಗೆ ಆರ್ ಸಿಬಿಯ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ.
ಆರ್ ಸಿಬಿ ಈ ಗೆಲುವಿನೊಂದಿಗೆ ಆಡಿರುವ 11 ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟಾರೆ 8 ಅಂಕಗಳನ್ನು ಗಳಿಸಿದೆ ಮತ್ತು ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಜಿಗಿದಿದೆ.
ಫಾಫ್ ಡು ಪ್ಲೆಸಿಸ್ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್‌ಗಳಲ್ಲಿ 50 ರನ್ ಗಡಿ ದಾಟಿಸಿದ ವಿರಾಟ್ ಕೊಹ್ಲಿ ಮತ್ತು ಫಾಪ್ ಆರ್ ಸಿಬಿ ಗೆಲುವಿಗೆ ನೆರವಾದರು.
ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಮತ್ತು ವಿಜಕುಮಾರ್ ವಿಶಾಕ್ 2-2 ವಿಕೆಟ್ ಪಡೆದರೆ, ಕ್ಯಾಮರೂನ್ ಗ್ರೀನ್ ಮತ್ತು ಕರ್ಣ್ ಶರ್ಮಾ 1-1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



