ಐಪಿಎಲ್ 2024: ಸೂರ್ಯಕುಮಾರ್ ಶತಕದ ನೆರವಿನಿಂದ ಹೈದರಾಬಾದ್ ವಿರುದ್ಧ ಮುಂಬೈ ಗೆಲುವು
ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಸೋಮವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮುಂಬೈ: ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಸೋಮವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ, ನಿಗದಿತ 20 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 173 ರನ್ ಸೇರಿಸಿತು.
ಗೆಲುವಿಗೆ 174 ರನ್ ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ, 17.2 ಓವರ್‌ಗೆ 3 ವಿಕೆಟ್ ಕಳೆದುಕೊಂಡು 174 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.
ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಇಶಾನ್ ಕಿಶನ್ 9 ರನ್ ಹಾಗೂ ರೋಹಿತ್ ಶರ್ಮಾ 4 ರನ್ ಸಿಡಿಸಿ ಔಟ್ ಆದರು. ನಮನ್ ದೀರ್ ಸಹ ಶೂನ್ಯಕ್ಕೆ ಮರಳಿದರು. ಆದರೆ ಸೂರ್ಯಕುಮಾರ್ ಯಾದವ್‌ಗೆ ತಿಲಕ್ ವರ್ಮಾ ಉತ್ತಮ ಸಾಥ್ ನೀಡಿದರು. ಸೂರ್ಯಕುಮಾರ್ ಯಾದವ್ ಅವರು ಕೇವಲ 51 ಎಸೆತದಲ್ಲಿ 12 ಫೋರ್ ಮತ್ತು 6 ಸಿಕ್ಸ್ ಮೂಲಕ 102 ರನ್ ಸಿಡಿಸಿ ಅಬ್ಬರಿಸಿದರು.
ಹೈದರಾಬಾದ್ ಪರ ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



