ಕ್ರಿಕೆಟ್

T20 ವಿಶ್ವಕಪ್ 2024: ಭಾರತ ತಂಡದ ನೂತನ ಜೆರ್ಸಿ ಅನಾವರಣ! ವಿಡಿಯೋ

ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಬಹು ನಿರೀಕ್ಷಿತ ಟಿ-20 ವಿಶ್ವಕಪ್ ಟೂರ್ನಿಯಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಸೋಮವಾರ ಅನಾವರಣಗೊಳಿಸಲಾಯಿತು.

T20 ವಿಶ್ವಕಪ್ 2024: ಭಾರತ ತಂಡದ ನೂತನ ಜೆರ್ಸಿ ಅನಾವರಣ! ವಿಡಿಯೋ
ರೋಹಿತ್ ಶರ್ಮಾ
Published On :

ನವದೆಹಲಿ: ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಬಹು ನಿರೀಕ್ಷಿತ ಟಿ-20 ವಿಶ್ವಕಪ್ ಟೂರ್ನಿಯಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಸೋಮವಾರ ಅನಾವರಣಗೊಳಿಸಲಾಯಿತು.

ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್ ತಂಡದ ಅಧಿಕೃತ ಕಿಟ್ ಪ್ರಾಯೋಜಕ ಅಡಿಡಾಸ್ ಹಿರಿಯ ಪುರುಷರ ಭಾರತ ತಂಡದ ಹೊಸ ಟಿ20 ಜೆರ್ಸಿಯನ್ನು ಅನಾವರಣಗೊಳಿಸಿತು.

ಕ್ರೀಡಾ ಉಡುಪು ತಯಾರಕ ಅಡಿಡಾಸ್ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ನೂತನ ಜೆರ್ಸಿಯ ವಿಡಿಯೋವನ್ನು ಹಂಚಿಕೊಂಡಿದೆ. ಕ್ರೀಡಾಂಗಣದ ಮೇಲೆ ಹೆಲಿಕಾಪ್ಟರ್ ನಲ್ಲಿ ಹಾರುತ್ತಿರುವ ರೀತಿಯಲ್ಲಿ ಇರುವ ಜೆರ್ಸಿಯನ್ನು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಮತ್ತಿತರ ಆಟಗಾರರಿಗೆ ತೋರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಜೂನ್‌ 1ರಂದು ಶುರುವಾಗಲಿರುವ ಟೂರ್ನಿಯಲ್ಲಿ ಭಾರತ ತಂಡ ಜೂನ್ 5ರಂದು ಐರ್ಲೆಂಡ್‌ ಎದುರು ತನ್ನ ಅಭಿಯಾನ ಆರಂಭಿಸಲಿದೆ. ಇಂಡಿಯಾ - ಪಾಕಿಸ್ತಾನ ಪಂದ್ಯ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.