ಕ್ರಿಕೆಟ್

ICC T20 World Cup: ಆರಂಭಿಕನಾಗಿ Virat Kohli ಕಣಕ್ಕಿಳಿಯಲಿ - ಸೌರವ್ ಗಂಗೂಲಿ

ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿ ಎಂದು ಭಾರತದ ಮಾಜಿ ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ ಹೇಳಿದ್ದಾರೆ.

ICC T20 World Cup: ಆರಂಭಿಕನಾಗಿ Virat Kohli  ಕಣಕ್ಕಿಳಿಯಲಿ - ಸೌರವ್ ಗಂಗೂಲಿ
ಕೊಹ್ಲಿ-ಸೌರವ್ ಗಂಗೂಲಿ
Published On :

ನವದೆಹಲಿ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿ ಎಂದು ಭಾರತದ ಮಾಜಿ ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ ಹೇಳಿದ್ದಾರೆ.

ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿರುವ ವಿರಾಟ್ ಕೊಹ್ಲಿಯನ್ನು ಮುಂಬರುವ ಟಿ–20 ವಿಶ್ವಕಪ್‌ನಲ್ಲಿ ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು ಎಂದು ಭಾರತ ತಂಡ ಮಾಜಿ ಆಟಗಾರ ಸೌರವ್ ಗಂಗೂಲಿ, ತಂಡದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೌರವ್ ಗಂಗೂಲಿ, '‘ವಿರಾಟ್‌ ಅವರು ಅತ್ಯುತ್ತಮವಾಗಿ ಆಟವಾಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ವೇಗವಾಗಿ 90ರನ್‌ ಗಳಿಸಿದರು. ಟಿ–20 ವಿಶ್ವಕಪ್‌ನಲ್ಲಿ ಅವರನ್ನು ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು. ಅವರ ಕೆಲವು ಐಪಿಎಲ್‌ ಇನಿಂಗ್ಸ್‌ಗಳು ಅದ್ಭುತವಾಗಿದ್ದವು ಎಂದು ಬಣ್ಣಿಸಿದ್ದಾರೆ.

ಅಂತೆಯೇ ವಿಶ್ವಕ‍‍‍ಪ್‌ಗೆ ಆಯ್ಕೆ ಮಾಡಿರುವ ತಂಡದ ಬಗ್ಗೆಯೂ ಪ್ರಶಂಸೆ ವ್ಯಕ್ತಪಡಿಸಿರುವ ಅವರು, 17 ವರ್ಷದ ಬಳಿಕ ಭಾರತ ಟ್ರೋಫಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಗಂಗೂಲಿ, ‘ಉತ್ತಮ ತಂಡವನ್ನೇ ಆಯ್ಕೆ ಮಾಡಲಾಗಿದೆ. ಬ್ಯಾಟಿಂಗ್‌, ಬೌಲಿಂಗ್‌ ವಿಭಾಗವೂ ಗಟ್ಟಿಯಾಗಿದೆ.

ಸದ್ಯ ವಿಶ್ವದಲ್ಲೇ ಬೂಮ್ರಾ ಉತ್ಯುತ್ತಮ ಬೌಲರ್. ಅನುಭವಿ ಕುಲದೀಪ್, ಅಕ್ಷರ್, ಸಿರಾಜ್‌ ಇದ್ದಾರೆ. ಇದೊಂದು ಉತ್ತಮ ಸಂಯೋಜಿತ ತಂಡ’ ಎಂದು ಗಂಗೂಲಿ ಹೇಳಿದ್ದಾರೆ.

ಈ ವರ್ಷದ ಐಪಿಎಲ್‌ನಲ್ಲಿ 12 ‍ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 70.44ರ ಸರಾಸರಿಯಲ್ಲಿ 634 ರನ್‌ ಗಳಿಸಿದ್ದಾರೆ. 153.51ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.