Team India coach ಹುದ್ದೆಯಿಂದ Rahul Dravid ನಿರ್ಗಮನ? ಜಯ್ ಶಾ ಹೇಳಿದ್ದೇನು?
ಭಾರತೀಯ ಕ್ರಿಕೆಟ್ ತಂಡಕ್ಕೆ ಹೊಸ ಕೋಚ್ ನೇಮಕಕ್ಕೆ ಜಾಹಿರಾತು ಶೀಘ್ರವೇ ಪ್ರಕಟಿಸುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದು, ರಾಹುಲ್ ದ್ರಾವಿಡ್ ಕೋಚ್ ಹುದ್ದೆಯಿಂದ ನಿರ್ಗಮಿಸುವುದು ದೃಢಪಟ್ಟಿದೆ.

ನವದೆಹಲಿ: ಭಾರತೀಯ ಕ್ರಿಕೆಟ್ ತಂಡಕ್ಕೆ ಹೊಸ ಕೋಚ್ ನೇಮಕಕ್ಕೆ ಜಾಹಿರಾತು ಶೀಘ್ರವೇ ಪ್ರಕಟಿಸುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದು, ರಾಹುಲ್ ದ್ರಾವಿಡ್ ಕೋಚ್ ಹುದ್ದೆಯಿಂದ ನಿರ್ಗಮಿಸುವುದು ದೃಢಪಟ್ಟಿದೆ.
ರಾಹುಲ್ ದ್ರಾವಿಡ್ 2021 ರ ನವೆಂಬರ್ ತಿಂಗಳಿನಿಂದ ಟೀಂ ಇಂಡಿಯಾಗೆ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2023 ರ ಏಕದಿನ ವಿಶ್ವಕಪ್ ಅಂತ್ಯದವರೆಗೂ ಅವರ ಸೇವಾ ಅವಧಿಯನ್ನು ಬಿಸಿಸಿಐ ವಿಸ್ತರಿಸಿತ್ತು. ಈಗ ಮತ್ತೊಂದು ಅವಧಿಗೆ ದ್ರಾವಿಡ್ ಅವರನ್ನು ಮುಂದುವರೆಸುವ ಸಾಧ್ಯತೆಗಳಿಲ್ಲ.
ಈಗ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ಮುಂದುವರೆಯಬೇಕೆಂದರೆ ಅವರು ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಜೂನ್ ತಿಂಗಳಿಗೆ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ನಡುವಿನ ಒಪ್ಪಂದ ಅಂತ್ಯವಾಗಲಿದೆ. ಈ ವೇಳೆಗೆ ಟೀಂ ಇಂಡಿಯಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾಗಿಯಾಗಲಿದೆ. ಇದೇ ವೇಳೆ ವಿದೇಶಿ ಕೋಚ್ ನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆಗಳನ್ನು ಬಿಸಿಸಿಐ ಕಾರ್ಯದರ್ಶಿ ತಳ್ಳಿಹಾಕಿಲ್ಲ. ಹೊಸ ಕೋಚ್ ಭಾರತೀಯರಾಗಿರಲಿದ್ದಾರೋ ಅಥವಾ ಇಲ್ಲವೋ ಎಂಬ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ. ಅದನ್ನು ಸಿಎಸಿ ನಿರ್ಧರಿಸಲಿದೆ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.
ಇತರ ಕೆಲವು ಅಂತರರಾಷ್ಟ್ರೀಯ ಮಂಡಳಿಗಳಂತೆ ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ತರಬೇತುದಾರರನ್ನು ನೇಮಿಸಿಕೊಳ್ಳುವ ಸಾಧ್ಯತೆಯನ್ನು ಜಯ್ ಶಾ ತಳ್ಳಿಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



