IPL 2024: ಮಳೆಯಿಂದ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಗುಜರಾತ್ ಪ್ಲೇ ಆಫ್ ಕನಸು ಭಗ್ನ!
ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೆಕೆಆರ್ ವಿರುದ್ದದ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ರೇಸ್ ನಿಂದ ಹೊರಬಿತ್ತು.

ಅಹಮದಾಬಾದ್: ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೆಕೆಆರ್ ವಿರುದ್ದದ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ರೇಸ್ ನಿಂದ ಹೊರಬಿತ್ತು.
ಕಳೆದ ವರ್ಷದ ರನ್ನರ್ಸ್ ಅಪ್ ಮತ್ತು 2022 ರ ಚಾಂಪಿಯನ್ ಗುಜರಾತ್ ತಂಡ 13 ಪಂದ್ಯಗಳಿಂದ 11 ಅಂಕಗಳನ್ನು ಗಳಿಸುವ ಮೂಲಕ ಪ್ಲೇ-ಆಫ್ ರೇಸ್‌ನಿಂದ ಹೊರ ಬಿದ್ದಿತು. ಕೆಕೆಆರ್ 13 ಪಂದ್ಯಗಳಿಂದ 19 ಅಂಕಗಳೊಂದಿಗೆ ಕ್ವಾಲಿಫೈಯರ್ 1 ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ.
ಸೋವಾರ ನಿಗದಿತ ಸಮಯದಲ್ಲಿ ರಾತ್ರಿ 7 ಗಂಟೆಗೆ ಟಾಸ್ ಆಗಲಿಲ್ಲ. ಸ್ವಲ್ಪ ಸಮಯ ಕಳೆದಂತೆ ನಿರಂತರ ಮಿಂಚಿನಿಂದಾಗಿ ತುಂತುರು ಮಳೆಯು ಹೆಚ್ಚಾಯಿತು. ಆದರೆ, ಮತ್ತೆ ಮತ್ತೆ ಮಳೆ ಬರುತ್ತಿದ್ದರಿಂದ ಕೊನೆಗೆ ರಾತ್ರಿ 10-56 ರ ಸುಮಾರಿಗೆ ಪಂದ್ಯವನ್ನು ರದ್ದುಗೊಳಿಸಿ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು. ಒಟ್ಟು 13 ಪಂದ್ಯಗಳನ್ನಾಡಿ, 5 ಪಂದ್ಯ ಗೆದ್ದು 7ರಲ್ಲಿ ಸೋತಿರುವ ಗುಜರಾತ್ ಒಟ್ಟು 11 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೇ 16 ರಂದು ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ದ ಕೊನೆಯ ಲೀಗ್ ಪಂದ್ಯವನ್ನು ಗಿಲ್ ಬಳಗ ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



