ಕ್ರಿಕೆಟ್

ಅವಮಾನಕ್ಕೆ ಸನ್ಮಾನ: ಭೋಜನಕ್ಕೆ ಕೆಎಲ್ ರಾಹುಲ್‌ ಆಹ್ವಾನಿಸಿದ LSG ಮಾಲೀಕ ಸಂಜೀವ್ ಗೋಯೆಂಕಾ; ಫೋಟೋ ವೈರಲ್

ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರು ನಾಯಕ ಕೆಎಲ್ ರಾಹುಲ್ ಮೇಲೆ ಕ್ಯಾಮೆರಾಗಳ ಮುಂದೆಯೇ ನಿಂದಿಸುವ ಮೂಲಕ ಅವಮಾನಿಸಿದ್ದರು. ಈ ಘಟನೆ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿತ್ತು.

ಅವಮಾನಕ್ಕೆ ಸನ್ಮಾನ: ಭೋಜನಕ್ಕೆ ಕೆಎಲ್ ರಾಹುಲ್‌ ಆಹ್ವಾನಿಸಿದ LSG ಮಾಲೀಕ ಸಂಜೀವ್ ಗೋಯೆಂಕಾ; ಫೋಟೋ ವೈರಲ್
ಸಂಜೀವ್ ಗೋಯೆಂಕಾ-ಕೆಎಲ್ ರಾಹುಲ್ ಭೇಟಿ
Published On :

ನವದೆಹಲಿ: ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರು ನಾಯಕ ಕೆಎಲ್ ರಾಹುಲ್ ಮೇಲೆ ಕ್ಯಾಮೆರಾಗಳ ಮುಂದೆಯೇ ನಿಂದಿಸುವ ಮೂಲಕ ಅವಮಾನಿಸಿದ್ದರು. ಈ ಘಟನೆ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿತ್ತು. ಅಲ್ಲದೆ ಮಾಲೀಕ ಸಂಜೀವ್ ಗೋಯೆಂಕಾ ವಿರುದ್ಧ ಟೀಕೆಗಳು ವ್ಯಕ್ತವಾಗಿದ್ದವು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ ಲಖನೌ ತಂಡ ಹೀನಾಯವಾಗಿ ಸೋತಿತ್ತು. ಇದರಿಂದ ಕೋಪಗೊಂಡಿದ್ದ ಸಂಜೀವ್ ಗೋಯೆಂಕಾ ಅವರು ಮೈದಾನದಲ್ಲೇ ಕೆಎಲ್ ರಾಹುಲ್ ಅವರನ್ನು ಪ್ರಶ್ನಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಟೀಕೆಗಳು ವ್ಯಕ್ತವಾಗಿದ್ದವು. ಇದೇ ಅಲ್ಲದೆ ಕರ್ನಾಟಕದ ಬ್ಯಾಟರ್ LSG ನಾಯಕತ್ವ ತೊರೆಯಬಹುದು ಎಂಬ ಊಹಾಪೋಹವನ್ನು ಹುಟ್ಟುಹಾಕಿತ್ತು.

ಇದೀಗ ಈ ವಿವಾದಕ್ಕೆ ತೇಪೆ ಹಚ್ಚಲು ಸಂಜೀವ್ ಗೋಯೆಂಕಾ ಮುಂದಾಗಿದ್ದು ಕೆಎಲ್ ರಾಹುಲ್ ಅವರನ್ನು ತಮ್ಮ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದರು. ಅದರಂತೆ ಗೋಯೆಂಕಾ ಮನೆಗೆ ತೆರಳಿದ ಕೆಎಲ್ ರಾಹುಲ್ ಅವರನ್ನು ಗೋಯೆಂಕಾ ಆತ್ಮೀಯವಾಗಿ ಅಪ್ಪಿ ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.