IPL 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್ ಗೆಲುವು!
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು.

ಗುವಾಹಟಿ: ಇಲ್ಲಿನ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ರಾಜಸ್ಥಾನ ರಾಯಲ್ಸ್ ನ ಟಾಪ್ 2 ಸ್ಥಾನಕ್ಕೂ ಅನಿಶ್ಚಿತತೆ ಎದುರಾಗಿದೆ. ಸನ್ ರೈಸರ್ಸ್ ಹಾಗೂ ಸಿಎಸ್ ಕೆ ಪೈಪೋಟಿ ನೀಡುತ್ತಿವೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ರಿಯಾನ್ ಪರಾಗ್ 48, ಆರ್ ಅಶ್ವಿನ್ 28, ಸಂಜು ಸ್ಯಾಮ್ಸನ್ 18, ಟಾಮ್ ಕೊಲೆರ್ 18 ರನ್ ಗಳಿಸದದ್ದು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.
ರಾಜಸ್ಥಾನ ರಾಯಲ್ಸ್ ನೀಡಿದ ಗೆಲುವಿನ ಗುರಿ ಬೆನ್ನಟ್ಟಿದ್ದ ಪಂಜಾಬ್ ಕಿಂಗ್ಸ್ ಪರ ಸ್ಯಾಮ್ ಕರಣ್ ಅಜೇಯ 63, ಜಾನಿ ಬೈರ್ ಸ್ಟಾ 14, ಜಿತೇಶ್ ಶರ್ಮಾ 22, ಅಶುತೋಷ್ ಶರ್ಮಾ 17 ರನ್ ನೆರವಿನಿಂದ 18.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



