IPL 2024: ಲಕ್ನೊ ವಿರುದ್ಧವೂ ಸೋತ ಮುಂಬೈ, ಹಾರ್ದಿಕ್ ಪಾಂಡ್ಯಾ ಪಡೆಗೆ 10ನೇ ಸ್ಥಾನ
ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಸೋಲಿನ ಸರಣಿ ಮುಂದುವರೆದಿದ್ದು, ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಹಾರ್ದಿಕ್ ಪಾಂಡ್ಯಾ ಪಡೆ ಸೋಲು ಕಂಡಿದೆ.

ಮುಂಬೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಸೋಲಿನ ಸರಣಿ ಮುಂದುವರೆದಿದ್ದು, ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಹಾರ್ದಿಕ್ ಪಾಂಡ್ಯಾ ಪಡೆ ಸೋಲು ಕಂಡಿದೆ.
ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್ಗಳು ಮುಕ್ತಾಯಗೊಂಡಾಗ 6 ವಿಕೆಟ್ ನಷ್ಟಕ್ಕೆ 196 ರನ್ ಬಾರಿಸಿ 18 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.
ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ.
ಇನ್ನು ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ.
ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್ಗಳು ಮುಕ್ತಾಯಗೊಂಡಾಗ 6 ವಿಕೆಟ್ ನಷ್ಟಕ್ಕೆ 196 ರನ್ ಬಾರಿಸಿ 18ರನ್ ಅಂತರದ ಸೋಲೊಪ್ಪಿಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



