IPL 2024: ಅಭಿಮಾನಿಗಳ ಕನಸು ಭಗ್ನ; RCB ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಜಯ, ಕ್ವಾಲಿಫೈಯರ್ ನಲ್ಲಿ ಹೈದರಾಬಾದ್ ವಿರುದ್ಧ ಸೆಣಸು!
ಅಭಿಮಾನಿಗಳ ಕನಸು ಕೊನೆಗೂ ಭಗ್ನವಾಗಿದ್ದು, ಹಾಲಿ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ 2ನೇ ಕ್ವಾಲಿಫೈಯರ್ ಗೆ ಪ್ರವೇಶ ಪಡೆದಿದೆ.

ಅಹ್ಮದಾಬಾದ್: ಅಭಿಮಾನಿಗಳ ಕನಸು ಕೊನೆಗೂ ಭಗ್ನವಾಗಿದ್ದು, ಹಾಲಿ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ 2ನೇ ಕ್ವಾಲಿಫೈಯರ್ ಗೆ ಪ್ರವೇಶ ಪಡೆದಿದೆ.
ಇಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ನೀಡಿದ 173 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ರಾಜಸ್ತಾನ 19 ಓವರ್ ನಲ್ಲೇ ಗುರಿ ತಲುಪಿ 2ನೇ ಕ್ವಾಲಿಫೈಯರ್ ಗೆ ಪ್ರವೇಶ ಪಡೆಯಿತು. ಆರಂಭದಿಂದಲೂ ಸಕಾರಾತ್ಮತವಾಗಿ ಆಡಿದ ರಾಜಸ್ತಾನ 19 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ರಾಜಸ್ತಾನ ಪರ ಯಶಸ್ವಿ ಜೈಸ್ವಾಲ್ 45ರನ್ ಗಳಿಸಿದರೆ, ರಿಯಾನ್ ಪರಾಗ್ 36 ಮತ್ತು ಶಿಮ್ರಾನ್ ಹೇಟ್ಮೆಯರ್ 26 ರನ್ ಗಳಿಸಿದರು. ಅಂತಿಮ ಹಂತದಲ್ಲಿ ಬಂದ ರೋವ್ಮನ್ ಪವೆಲ್ 16 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.
ಆರ್ ಸಿಬಿ ಪರ ಮಹಮದ್ ಸಿರಾಜ್ 2, ಲಾಕಿ ಫರ್ಗುಸನ್, ಕರಣ್ ಶರ್ಮಾ, ಕೆಮರಾನ್ ಗ್ರೀನ್ ತಲಾ ಒಂದು ವಿಕೆಟ್ ಪಡೆದರು.
ಈ ಗೆಲುವಿನ ಮೂಲಕ ರಾಜಸ್ತಾನ ತಂಡ 2ನೇ ಕ್ವಾಲಿಫೈಯರ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



