ಕ್ರಿಕೆಟ್

BGT 2025: 487/6 ಭಾರತ ಡಿಕ್ಲೇರ್, ಆಸ್ಟ್ರೇಲಿಯಾಗೆ ಗೆಲ್ಲಲು ಬೃಹತ್ ರನ್ ಗುರಿ

ಭಾರತದ ಪರ ಯಶಸ್ವಿ ಜೈಸ್ವಾಲ್ 161, ಕೆಎಲ್ ರಾಹುಲ್ 77, ದೇವದತ್ ಪಡಿಕ್ಕಲ್ 25, ವಾಷಿಂಗ್ಟನ್ ಸುಂದರ್ 29, ನಿತೀಶ್ ರೆಡ್ಡಿ ಅಜೇಯ 38 ರನ್ ಮತ್ತು ವಿರಾಟ್ ಕೊಹ್ಲಿ ಅಜೇಯ 100 ರನ್ ಗಳಿಸಿದರು.

BGT 2025: 487/6 ಭಾರತ ಡಿಕ್ಲೇರ್, ಆಸ್ಟ್ರೇಲಿಯಾಗೆ ಗೆಲ್ಲಲು ಬೃಹತ್ ರನ್ ಗುರಿ
ವಿರಾಟ್ ಕೊಹ್ಲಿ ಬ್ಯಾಟಿಂಗ್
Published On :

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ 487 ರನ್ ಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಪ್ಯಾಟ್ ಕಮಿನ್ಸ್ ಪಡೆಗೆ ಗೆಲ್ಲಲು 533 ರನ್ ಬೃಹತ್ ಗುರಿ ನೀಡಿದೆ.

2ನೇ ಇನ್ನಿಂಗ್ಸ್ ನಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 487 ರನ್ ಕಲೆ ಹಾಕಿತು. ಭಾರತದ ಪರ ಯಶಸ್ವಿ ಜೈಸ್ವಾಲ್ 161, ಕೆಎಲ್ ರಾಹುಲ್ 77, ದೇವದತ್ ಪಡಿಕ್ಕಲ್ 25, ವಾಷಿಂಗ್ಟನ್ ಸುಂದರ್ 29, ನಿತೀಶ್ ರೆಡ್ಡಿ ಅಜೇಯ 38 ರನ್ ಮತ್ತು ವಿರಾಟ್ ಕೊಹ್ಲಿ ಅಜೇಯ 100 ರನ್ ಗಳಿಸಿದರು.

ಕೊಹ್ಲಿ ಶತಕ ಸಿಡಿಸುತ್ತಿದ್ದಂತೆಯೇ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಆಸ್ಟ್ರೇಲಿಯಾ ಪರ ನಾಥನ್ ಲೈಆನ್ 2 ವಿಕೆಟ್, ಮಿಚ್ ಮಾರ್ಶ್, ಕಮಿನ್ಸ್, ಹೇಜಲ್ವುಡ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ 1 ವಿಕೆಟ್ ಪಡೆದರು. ಅಂತಿಮವಾಗಿ ಭಾರತ 487 ರನ್ ಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಆಸ್ಟ್ರೇಲಿಯಾಗೆ ಗೆಲ್ಲಲು 533 ರನ್ ಬೃಹತ್ ಗುರಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.