ಕ್ರಿಕೆಟ್

BGT 2025: 3ನೇ ದಿನದಾಟ ಅಂತ್ಯ; ಆಸ್ಟ್ರೇಲಿಯಾಗೆ ಮರ್ಮಾಘಾತ, ಗೆಲುವಿನತ್ತ ಭಾರತ ದಾಪುಗಾಲು!

ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

BGT 2025: 3ನೇ ದಿನದಾಟ ಅಂತ್ಯ; ಆಸ್ಟ್ರೇಲಿಯಾಗೆ ಮರ್ಮಾಘಾತ, ಗೆಲುವಿನತ್ತ ಭಾರತ ದಾಪುಗಾಲು!
ಆಸ್ಟ್ರೇಲಿಯಾಗೆ ಆಘಾತ ನೀಡಿದ ಭಾರತ
Published On :

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದೆ.

ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

ಭಾರತ ನೀಡಿದ 533 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ ಕೇವಲ 12 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಭಾರತದ ಪರ ಮತ್ತೆ ಭರ್ಜರಿ ಬೌಲಿಂಗ್ ಮಾಡಿದ ಜಸ್ ಪ್ರೀತ್ ಬುಮ್ರಾ ಮತ್ತು ಮಹಮದ್ ಸಿರಾಜ್ ಆಸ್ಟ್ರೇಲಿಯಾದ ಮೂರು ವಿಕೆಟ್ ಕಬಳಿಸಿದ್ದಾರೆ. ಬುಮ್ರಾ ನಾಥನ್ ಮೆಕ್‌ಸ್ವೀನಿ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ವಿಕೆಟ್ ಪಡೆದರೆ, ಮಹಮದ್ ಸಿರಾಜ್ ಪ್ಯಾಟ್ ಕಮಿನ್ಸ್ ವಿಕೆಟ್ ಪಡೆದರು.

ಈ ಮೂಲಕ ಭಾರತ ಮೊದಲ ಪಂದ್ಯದ ಗೆಲುವಿನ ಭರವಸೆ ಮೂಡಿಸಿದ್ದು, ಭಾರತ ಗೆಲ್ಲಲು ಇನ್ನು 7 ವಿಕೆಟ್ ಪಡೆಯಬೇಕಿದೆ. ಅಂತೆಯೇ ಆಸ್ಟ್ರೇಲಿಯಾ ಗೆಲ್ಲಲು ಇನ್ನೂ 522 ರನ್ ಗಳಿಸಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.