ಕ್ರಿಕೆಟ್

BGT 2025: ಆಸಿಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, Virat Kohli ಹೊಸ ಮೈಲುಗಲ್ಲು

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದು, ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.

BGT 2025: ಆಸಿಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, Virat Kohli ಹೊಸ ಮೈಲುಗಲ್ಲು
ವಿರಾಟ್ ಕೊಹ್ಲಿ
Published On :

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಸ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದು, ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.

ದ್ವಿತೀಯ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 52* ರನ್​ ಗಳಿಸಿ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 2000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

ಆ ಮೂಲಕ ವಿರಾಟ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ ಭಾರತದ 5ನೇ ಬ್ಯಾಟರ್ ಎನಿಸಿಕೊಂಡರು. ಹಾಗೆಯೇ ಈ ಸಾಧನೆ ಮಾಡಿದ 7ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (3262), ರಿಕಿ ಪಾಂಟಿಂಗ್ (2555), ವಿವಿಎಸ್​ ಲಕ್ಷ್ಮಣ್ (2434), ರಾಹುಲ್ ದ್ರಾವಿಡ್ (2143), ಮೈಕೆಲ್ ಕ್ಲಾರ್ಕ್​ (2049) ಮತ್ತು ಚೇತೇಶ್ವರ ಪೂಜಾರ (2033) ಮಾತ್ರ ಈ ಸಾಧನೆ ಮಾಡಿದ್ದರು.

ಇದೀಗ 44 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 2000* ರನ್ ಪೂರೈಸಿದ್ದಾರೆ. ಈ ಮೂಲಕ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್​ಗಳ ಮೈಲುಗಲ್ಲು ದಾಟಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ 34 ಟೆಸ್ಟ್ ಪಂದ್ಯಗಳಲ್ಲಿ 65 ಇನಿಂಗ್ಸ್​ ಆಡಿರುವ ಸಚಿನ್ ಒಟ್ಟು 3262 ರನ್ ಕಲೆಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.