ಕ್ರಿಕೆಟ್

BGT 2025: ಆಸೀಸ್ ವಿರುದ್ಧದ ಮೊದಲ Test; ದಾಖಲೆಯ 295 ರನ್ ಗಳಿಂದ ಗೆದ್ದ ಭಾರತ, 1-0 ಅಂತರದಿಂದ ಸರಣಿ ಮುನ್ನಡೆ

ಈ ಹಿಂದೆ ಡಿಸೆಂಬರ್ 1977 ರಲ್ಲಿ ಆಸ್ಟ್ರೇಲಿಯಾದ MCG ಅಂಗಳದಲ್ಲಿ 222 ರನ್ ಗಳಿಂದ ಭಾರತ ಗೆಲುವು ಸಾಧಿಸಿ ದಾಖಲೆ ಮಾಡಿತ್ತು. ಆ ದಾಖಲೆಯನ್ನು ಈಗ ಮುರಿದಿದೆ. ಒಟ್ಟಾರೇ ಇದು ಟೆಸ್ಟ್ ಕ್ರಿಕೆಟ್ ನಲ್ಲಿ ಭಾರೀ ರನ್ ಗಳಿಂದ ಜಯ ಗಳಿಸಿದ ಒಂಬತ್ತನೇ ಅತಿದೊಡ್ಡ ವಿಜಯವಾಗಿದೆ.

BGT 2025: ಆಸೀಸ್ ವಿರುದ್ಧದ ಮೊದಲ Test; ದಾಖಲೆಯ 295 ರನ್ ಗಳಿಂದ ಗೆದ್ದ ಭಾರತ, 1-0 ಅಂತರದಿಂದ ಸರಣಿ ಮುನ್ನಡೆ
ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತೀಯ ಆಟಗಾರರು
Published On :

ಪರ್ತ್: ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆಯ 295 ರನ್ ಗಳಿಂದ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಈ ಹಿಂದೆ ಡಿಸೆಂಬರ್ 1977 ರಲ್ಲಿ ಆಸ್ಟ್ರೇಲಿಯಾದ MCG ಅಂಗಳದಲ್ಲಿ 222 ರನ್ ಗಳಿಂದ ಭಾರತ ಗೆಲುವು ಸಾಧಿಸಿ ದಾಖಲೆ ಮಾಡಿತ್ತು. ಆ ದಾಖಲೆಯನ್ನು ಈಗ ಮುರಿದಿದೆ. ಒಟ್ಟಾರೇ ಇದು ಟೆಸ್ಟ್ ಕ್ರಿಕೆಟ್ ನಲ್ಲಿ ಭಾರೀ ರನ್ ಗಳಿಂದ ಜಯ ಗಳಿಸಿದ ಒಂಬತ್ತನೇ ಅತಿದೊಡ್ಡ ವಿಜಯವಾಗಿದೆ.

'ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವು 150 ಅಥವಾ ಅದಕ್ಕಿಂತ ಕಡಿಮೆ ರನ್‌ಗಳಿಗೆ ಆಲೌಟ್ ಆಗಿದ್ದರೂ ಭಾರತದ ಹೊರಗೆ ಟೆಸ್ಟ್ ಗೆದ್ದಿರುವುದು ಇದೇ ಮೊದಲು' ಎಂದು ಕ್ರಿಕೆಟ್ statistician ರಜನೀಶ್ ಗುಪ್ತಾ ಎಕ್ಸ್‌ನಲ್ಲಿ ಹೇಳಿದ್ದಾರೆ.

ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆದ ನಂತರ ನಂಬಲಾಗದ ರೀತಿಯಲ್ಲಿ ಕಂಬ್ಯಾಕ್ ಆಯಿತು. ನಾಯಕ ಜಸ್ಪ್ರೀತ್ ಬುಮ್ರಾ ಮೊದಲ ಇನಿಂಗ್ಸ್‌ನಲ್ಲಿ ಎಂಟು ವಿಕೆಟ್‌ಗಳನ್ನು ಕಬಳಿಸಿ ಆಸ್ಟ್ರೇಲಿಯಾವನ್ನು 104 ರನ್‌ಗಳಿಗೆ ಆಲೌಟ್ ಮಾಡಿದರು. ಎರಡನೇ ಇನ್ನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ (161) ಮತ್ತು ವಿರಾಟ್ ಕೊಹ್ಲಿ (100) ರನ್ ಗಳ ಬ್ಯಾಟಿಂಗ್‌ನೊಂದಿಗೆ ಭಾರತ ಉತ್ತಮ ರನ್ ಕಲೆಹಾಕಿತು.

ಮೊಹಮ್ಮದ್ ಸಿರಾಜ್ ಅವರು ಟೆಸ್ಟ್‌ನಲ್ಲಿ ಐದು ವಿಕೆಟ್‌ಗಳೊಂದಿಗೆ ಫಾರ್ಮ್‌ಗೆ ಮರಳಿದರು. ರಾಣಾ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಸ್ಮರಣೀಯ ಚೊಚ್ಚಲ ಪಂದ್ಯವನ್ನು ಸಂಭ್ರಮಿಸಿದರು.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ 487 ರನ್ ಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡು, ಪ್ಯಾಟ್ ಕಮಿನ್ಸ್ ಪಡೆಗೆ ಗೆಲ್ಲಲು 533 ರನ್ ಬೃಹತ್ ಗುರಿ ನೀಡಿತ್ತು. ಎಂಟು ವಿಕೆಟ್ ಪಡೆದ ಜಸ್ಪ್ರೀತ್ ಬೂಮ್ರಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.