ICC Womens T20 World Cup 2024: ಪಾಕಿಸ್ತಾನ್ ವಿರುದ್ಧ ಗೆದ್ದು ಬೀಗಿದ ಭಾರತ
ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಮಹಿಳಾ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 105 ರನ್ ಗಳ ಅಲ್ಪ ಮೊತ್ತ ಪೇರಿಸಿತ್ತು.

ದುಬೈ: ಐಸಿಸಿ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಪ್ರಾಯಾಸದ ಗೆಲುವು ಸಾಧಿಸಿದೆ.
ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಮಹಿಳಾ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 105 ರನ್ ಗಳ ಅಲ್ಪ ಮೊತ್ತ ಪೇರಿಸಿತ್ತು. 106 ರನ್ ಗಳ ಗುರಿ ಬೆನ್ನಟ್ಟಿ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 108 ರನ್ ಪೇರಿಸಿದೆ.
ಪಾಕಿಸ್ತಾನ ಪರ ಬ್ಯಾಟಿಂಗ್ ನಲ್ಲಿ ಮುನೀಬಾ ಅಲಿ 17, ನಿದಾ ದಾರ್ 28 ಮತ್ತು ಸೈದಾ ಶಾ ಅಜೇಯ 14 ರನ್ ಪೇರಿಸಿದ್ದರು. ಭಾರತ ಪರ ಬೌಲಿಂಗ್ ನಲ್ಲಿ ಅರುಂಧತಿ ರೆಡ್ಡಿ 3, ಶ್ರೇಯಾಂಕಾ ಪಟೇಲ್ 2, ರೇಣುಕಾ ಸಿಂಗ್, ದೀಪ್ತಿ ಶರ್ಮಾ, ಆಶಾ ಶೋಭನ ತಲಾ 1 ವಿಕೆಟ್ ಪಡೆದಿದ್ದಾರೆ.
ಭಾರತ ಪರ ಶಫಾಲಿ ವರ್ಮಾ 32, ಜೆಮಿಮಾ ರಾಡ್ರಿಗಸ್ 23 ಮತ್ತು ಹರ್ಮನ್ ಪ್ರೀತ್ ಕೌರ್ 29 ರನ್ ಗಳಿಸಿದ್ದಾಗ ಗಾಯದಿಂದಾಗಿ ಪಂದ್ಯದಿಂದ ನಿವೃತ್ತಿ ಪಡೆದರು. ಪಾಕ್ ಪರ ಫಾತೀಮಾ ಸನಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



