ಕ್ರಿಕೆಟ್

2nd Test: ತತ್ತರಿಸಿದ ಭಾರತ, ಭೋಜನ ವಿರಾಮದ ವೇಳೆಗೆ 107/7, 152 ರನ್ ಹಿನ್ನಡೆ

ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದ್ದ ಭಾರತ ತಂಡ ಇಂದು ಕೇವಲ 91ರನ್ ಗಳ ಅಂತರದಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡಿದೆ. ಭಾರತ ಇನ್ನೂ 152 ರನ್ ಗಳ ಹಿನ್ನಡೆಯಲ್ಲಿದೆ.

2nd Test: ತತ್ತರಿಸಿದ ಭಾರತ, ಭೋಜನ ವಿರಾಮದ ವೇಳೆಗೆ 107/7, 152 ರನ್ ಹಿನ್ನಡೆ
ಕುಸಿದ ಭಾರತ ತಂಡ
Published On :

ಪುಣೆ: 2ನೇ ಟೆಸ್ಟ್ ಪಂದ್ಯದ 2ನೇ ದಿನ ನ್ಯೂಜಿಲೆಂಡ್ ಬೌಲಗಳ ಆರ್ಭಟಕ್ಕೆ ತತ್ತರಿಸಿರುವ ಭಾರತ ತಂಡ ಕೇವಲ 107 ರನ್ ಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದ್ದ ಭಾರತ ತಂಡ ಇಂದು ಕೇವಲ 91ರನ್ ಗಳ ಅಂತರದಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡಿದೆ.

ಭಾರತ ಇನ್ನೂ 152 ರನ್ ಗಳ ಹಿನ್ನಡೆಯಲ್ಲಿದೆ. ಭಾರತದ ಪರ ಯಶಸ್ವಿ ಜೈಸ್ವಾಲ್ ಮತ್ತು ಶುಭ್ ಮನ್ ಗಿಲ್ ತಲಾ 30 ರನ್ ಗಳಿಸಿ ಔಟಾದರೆ ವಿರಾಟ್ ಕೊಹ್ಲಿ ಮತ್ತೆ ಕೇವಲ 1 ರನ್ ಗಳಿಸಿ ಔಟಾಗಿ ನಿರಾಶೆ ಮೂಡಿಸಿದರು.

ಕೊಹ್ಲಿ ಔಟಾಗುತ್ತಿದ್ದಂತೆಯೇ ಭಾರತ ತಂಡದ ಮಧ್ಯಮ ಕ್ರಮಾಂಕ ದಿಢೀರ್ ಕುಸಿತ ಕಂಡಿತು. ರಿಷಬ್ ಪಂತ್ 18 ರನ್ ಗಳಿಸಿ ಔಟಾದರೆ, ಸರ್ಫರಾಜ್ ಖಾನ್ 11, ಆರ್ ಅಶ್ವಿನ್ 4 ರನ್ ಗಳಿ ಔಟಾದರು. ಭೋಜನ ವಿರಾಮದ ವೇಳೆಗೆ ಭಾರತ ತಂಡ 7 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ. 11 ರನ್ ಗಳಿಸಿರುವ ರವೀಂದ್ರ ಜಡೇಜಾ ಮತ್ತು 2 ರನ್ ಗಳಿಸಿರುವ ವಾಷಿಂಗ್ಟನ್ ಸುಂದರ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

ನ್ಯೂಜಿಲೆಂಡ್ ಪರ ಮೆಚೆಲ್ ಸ್ಯಾಂಥ್ನರ್ 4 ವಿಕೆಟ್, ಗ್ಲೇನ್ ಫಿಲಿಪ್ಸ್ 2 ಮತ್ತು ಟಿಮ್ ಸೌಥಿ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.