ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಹೀನಾಯ ಸೋಲು: ಟೆಸ್ಟ್ ಸರಣಿ ಕಿವೀಸ್ ಕೈವಶ!
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳಿಂದ ಸೋಲು ಕಂಡಿದೆ. ಈ ಮೂಲಕ ಭಾರತ ಟೆಸ್ಟ್ ಸರಣಿಯನ್ನು ಕೈಚೆಲ್ಲಿದೆ.

ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳಿಂದ ಸೋಲು ಕಂಡಿದೆ. ಈ ಮೂಲಕ ಭಾರತ ಟೆಸ್ಟ್ ಸರಣಿಯನ್ನು ಕೈಚೆಲ್ಲಿದೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ 259 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಭಾರತ 156 ರನ್ ಗಳಿಗೆ ಆಲೌಟ್ ಆಗುವ ಮೂಲಕ 103 ರನ್ ಗಳ ಹಿನ್ನಡೆ ಅನುಭವಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ 255 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 359 ರನ್ ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ 245 ರನ್ ಗಳಿಗೆ ಆಲೌಟ್ ಆಗುವ ಮೂಲಕ 113 ರನ್ ಗಳಿಂದ ಪಂದ್ಯ ಸೋತಿದೆ.
ಭಾರತ ತಂಡ ಎರಡನೇ ಇನ್ನಿಂಗ್ಸ್ ನಲ್ಲೂ ಲಯ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ರೋಹಿತ್ ಶರ್ಮಾ 8 ಮತ್ತು ವಿರಾಟ್ ಕೊಹ್ಲಿ 17 ರನ್ ಹಾಗೂ ರಿಷಬ್ ಪಂತ್ ಶೂನ್ಯ ಸುತ್ತಿದ್ದು ತಂಡಕ್ಕೆ ಹಿನ್ನಡೆಯಾಯಿತು. ಇನ್ನು ಯಶಸ್ವಿ ಜೈಸ್ವಾಲ್ 77 ರನ್ ಸಿಡಿಸುವ ಮೂಲಕ ಭಾರತಕ್ಕೆ ಚೇತರಿಕೆ ತಂದುಕೊಟ್ಟರು. ಆದರೆ ನಂತರ ಬಂದ ಬ್ಯಾಟರ್ ಗಳು ಹೆಚ್ಚು ಕಾಲ ಕ್ರಿಸ್ ನಲ್ಲಿ ನಿಂತು ಆಡುವಲ್ಲಿ ವಿಫಲರಾದರು.
ಶುಭ್ಮನ್ ಗಿಲ್ 23, ವಾಷಿಂಗ್ಟನ್ ಸುಂದರ್ 21, ಅಶ್ವಿನ್ 18 ರನ್ ಸಿಡಿಸಿ ಔಟಾದರೆ ರವಿಂದ್ರ ಜಡೇಜಾ 42 ರನ್ ಸಿಡಿಸಿ ಔಟಾದರು. ನ್ಯೂಜಿಲ್ಯಾಂಡ್ ಪರ ಮಿಚೆಲ್ ಸ್ಯಾಂಟ್ನರ್ 6 ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



