ಕನ್ನಡಿಗ Robin Uthappa ಗೆ ಬೆದರಿಕೆ ಹಾಕಿ ಸಹಿ ಮಾಡಿಸಿದ್ದ IPL ಫ್ರಾಂಚೈಸಿ..!
ರಾಬಿನ್ ಉತ್ತಪ್ಪ ಐಪಿಎಲ್ ವೇಳೆ ಉಂಟಾದ ಕಹಿ ಅನುಭವನ್ನು ಬಿಚ್ಚಿಟ್ಟಿದ್ದಾರೆ. 2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರವನ್ನು ರಾಬಿನ್ ಉತ್ತಪ್ಪ ಬಹಿರಂಗಪಡಿಸಿದ್ದಾರೆ.

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬೆದರಿಸಿ ಐಪಿಎಲ್ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿದ್ದ ಆಘಾತಕಾರಿ ವಿಚಾರ ಇದೀಗ ಬೆಳಕಿಗೆ ಬಂದಿದೆ.
ಈ ಬಗ್ಗೆ ಸ್ವತಃ ರಾಬಿನ್ ಉತ್ತಪ್ಪ ತಮ್ಮ ಮೌನ ಮುರಿದಿದ್ದು, ರಾಬಿನ್ ಉತ್ತಪ್ಪ ಐಪಿಎಲ್ ವೇಳೆ ಉಂಟಾದ ಕಹಿ ಅನುಭವನ್ನು ಬಿಚ್ಚಿಟ್ಟಿದ್ದಾರೆ. 2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರವನ್ನು ರಾಬಿನ್ ಉತ್ತಪ್ಪ ಬಹಿರಂಗಪಡಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ರಾಬಿನ್, ಖಿನ್ನತೆ ಮತ್ತು ಆತ್ಮಹತ್ಯಾ ಆಲೋಚನೆಗಳೊಂದಿಗೆ ಹೋರಾಡುವವರಿಗೆ ಈ ವಿಡಿಯೋ ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ತಾವು ಅನುಭವಿಸಿದ ಖಿನ್ನತೆಯ ಬಗ್ಗೆ ಮಾತನಾಡಿರುವ ರಾಬಿನ್ ಉತ್ತಪ್ಪ, '2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು. ಈ ಟ್ರಾನ್ಸ್ಫರ್ಗೆ ನಾನು ಒಪ್ಪಿರಲಿರಲಿಲ್ಲ. ಟ್ರಾನ್ಸ್ಫರ್ ಪೇಪರ್‌ಗಳಿಗೆ ಸಹಿ ಹಾಕಲು ನಿರಾಕರಿಸಿದ್ದೆ.
ನೀವು ಈ ಟ್ರೇಡ್ ಪತ್ರಗಳಿಗೆ ಸಹಿ ಮಾಡದಿದ್ದರೆ, ನಿಮಗೆ ಪ್ಲೇಯಿಂಗ್ ಇಲೆವೆನ್ನಲ್ಲಂತು ಚಾನ್ಸ್ ನೀಡುವುದಿಲ್ಲ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಉಸ್ತುವಾರಿ ವ್ಯಕ್ತಿಯೊಬ್ಬರು ಬೆದರಿಕೆಯೊಡ್ಡಿದ್ದರು. ಹೀಗಾಗಿ ನಾನು ಟ್ರಾನ್ಸ್ಫರ್ಗೆ ಒಪ್ಪಿಗೆ ನೀಡಲೇಬೇಕಾಯಿತು ಎಂದು ತಮಗಾದ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.
ಅಲ್ಲದೆ ಈ ಘಟನೆ ಬಳಿಕ ನಾನು ಖಿನ್ನತೆಗೆ ಒಳಗಾದೆ. ಇದಾಗ್ಯೂ ನಾನು 2009 ರಲ್ಲಿ ಆರ್ಸಿಬಿ ಪರ ಉತ್ತಮವಾಗಿ ಆಡಿದೆ. ಆದರೆ 2011 ರಲ್ಲಿ ನಾನು ನನ್ನ ಮೇಲಿನ ಸಂಪೂರ್ಣ ಕಂಟ್ರೋಲ್ ಕಳೆದುಕೊಂಡಿದ್ದೆ. ದೇಹ ತೂಕ ಹೆಚ್ಚಾಯಿತು. ಚಿಂತೆಗೆ ಒಳಗಾದೆ. ಈ ಸಂದರ್ಭದಲ್ಲಿ ನನ್ನ ತಾಯಿ ನೆರವಿಗೆ ನಿಂತರು. ಖಿನ್ನತೆಯಿಂದ ಹೊರಬರಲು ಸಹಾಯ ಮಾಡಿದರು ಎಂದು ಉತ್ತಪ್ಪ ಹೇಳಿದ್ದಾರೆ.
ಅಂದಹಾಗೆ 2009 ರಲ್ಲಿ ರಾಬಿನ್ ಉತ್ತಪ್ಪ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಮರು ಸೀಸನ್ನಲ್ಲೇ ಮುಂಬೈ ಅವರನ್ನು ಆರ್ಸಿಬಿಗೆ ಟ್ರಾನ್ಸ್ಫರ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



