Moeen Ali: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ನ ಆಲ್ ರೌಂಡರ್ ನಿವೃತ್ತಿ ಘೋಷಣೆ
ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೊಯಿನ್ ಅಲಿ ಇಂದು (ಭಾನುವಾರ) ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನಿವೃತ್ತಿ ಕುರಿತು ಪೋಸ್ಟ್ ಮಾಡಿರುವ ಮೊಯಿನ್ ಅಲಿ, ‘ನನಗೆ 37 ವರ್ಷ ವಯಸ್ಸಾಗಿದೆ. ಈ ತಿಂಗಳ ಆಸ್ಟ್ರೇಲಿಯಾ ಸರಣಿಗೂ ಆಯ್ಕೆಯಾಗಿಲ್ಲ. ನಾನು ಇಂಗ್ಲೆಂಡ್ ಪರವಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಇದು ಮುಂದಿನ ಪೀಳಿಗೆಗೆ ಅವಕಾಶ ನೀಡುವ ಸಮಯವಾಗಿದ್ದು, ನಿವೃತ್ತಿ ಘೋಷಿಸುವುದು ಸೂಕ್ತ’ ಎಂದು ಮೊಯಿನ್ ಅಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂತೆಯೇ 'ನನಗೆ ತುಂಬಾ ಹೆಮ್ಮೆ ಇದೆ. ನಾನು ಮೊದಲು ಇಂಗ್ಲೆಂಡ್‌ಗಾಗಿ ಆಡಿದಾಗ ಎಷ್ಟು ಪಂದ್ಯಗಳನ್ನು ಆಡುತ್ತೇನೆ ಎಂದು ನನಗೆ ತಿಳಿದಿರಲಿಲ್ಲ. ಅಂದಿನಿಂದ ಇಂದಿನವರೆಗೆ ಸುಮಾರು 300 ಪಂದ್ಯಗಳನ್ನು ಆಡಲು ಅವಕಾಶ ದೊರೆತಿದೆ ಎಂದು ಭಾವುಕರಾಗಿ ಹೇಳಿದ್ದಾರೆ.
ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ಅವರು ಒಟ್ಟು 298 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಎಲ್ಲಾ ಮಾದರಿಗಳಲ್ಲೂ 6,678 ರನ್ ಗಳಿಸಿದ್ದಾರೆ. ಜತೆಗೆ, 366 ವಿಕೆಟ್‌ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಅಂತೆಯೇ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಚೆನ್ನೈ ಸೂಪರ್ ಕಿಂಗ್ಸ್ ಪರ ಮೊಯಿನ್ ಅಲಿ ಕಣಕ್ಕಿಳಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



