1st Test Match: ಅನಿಲ್ ಕುಂಬ್ಳೆ ಅಪರೂಪದ ದಾಖಲೆ ಮುರಿದ R Ashwin
ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ಶತಕ ಸಿಡಿಸಿ ಎರಡನೇ ಇನ್ನಿಂಗ್ಸ್ ಬೌಲಿಂಗ್ ನಲ್ಲಿ 6 ವಿಕೆಟ್ ಪಡೆದ ಆರ್ ಅಶ್ವಿನ್ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

ಚೆನ್ನೈ: ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ತಂಡ ಆಲ್ರೌಂಡರ್ ಆರ್ ಅಶ್ವಿನ್ ಭಾರತದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಹೌದು.. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್ ಗಳ ಅಂತರದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿದ್ದು, ಆ ಮೂಲಕ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ಶತಕ ಸಿಡಿಸಿ ಎರಡನೇ ಇನ್ನಿಂಗ್ಸ್ ಬೌಲಿಂಗ್ ನಲ್ಲಿ 6 ವಿಕೆಟ್ ಪಡೆದ ಆರ್ ಅಶ್ವಿನ್ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.
ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಕೀರ್ತಿಗೆ ಆರ್ ಅಶ್ವಿನ್ ಪಾತ್ರರಾಗಿದ್ದಾರೆ. ಈ ಹಿಂದೆ ಈ ಕೀರ್ತಿ ಭಾರತದ ಸ್ಪಿನ್ ಮಾತ್ರಿಕ ಅನಿಲ್ ಕುಂಬ್ಳೆ ಹೆಸರಿಲ್ಲಿತ್ತು. ಕುಂಬ್ಳೆ 4ನೇ ಇನ್ನಿಂಗ್ಸ್ ನಲ್ಲಿ ಒಟ್ಟು 94 ವಿಕೆಟ್ ಕಬಳಿಸಿದ್ದರು. 93 ವಿಕೆಟ್ ಗಳಿಸಿದ್ದ ಅಶ್ವಿನ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರು.
ಆದರೆ ಇಂದು ಬಾಂಗ್ಲಾದೇಶ ವಿರುದ್ಧ 2ನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆಯುವ ಮೂಲಕ ತಮ್ಮ ವಿಕೆಟ್ ಗಳಿಕೆಯನ್ನು 99ಕ್ಕೆ ಏರಿಕೆ ಮಾಡಿಕೊಂಡು ಅಗ್ರ ಸ್ಥಾನಕ್ಕೇರಿದ್ದಾರೆ.
ಈ ಪಟ್ಟಿಯಲ್ಲಿ 60 ವಿಕೆಟ್ ಪಡೆದಿರುವ ಬಿಷನ್ ಸಿಂಗ್ ಬೇಡಿ 3ನೇ ಸ್ಥಾನದಲ್ಲಿದ್ದು, ತಲಾ 54 ವಿಕೆಟ್ ಪಡೆದಿರುವ ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಜಂಟಿ 4ನೇ ಸ್ಥಾನದಲ್ಲಿದ್ದಾರೆ.
Most wickets in fourth innings for India
99 R Ashwin
94 Anil Kumble
60 Bishan Bedi
54 Ishant Sharma/ Ravindra Jadeja
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



