ಟಿ20 ಕ್ರಿಕೆಟ್ ಮಾದರಿಗೆ ಬಾಂಗ್ಲಾ ಆಲ್ ರೌಂಡರ್ ಶಕೀಬ್ ಅಲ್ ಹಸನ್ ನಿವೃತ್ತಿ ಘೋಷಣೆ!
ಭಾರತ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮುನ್ನಾ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.ಶಕೀಬ್ ಅಲ್ ಹಸನ್, ಬಾಂಗ್ಲಾದೇಶ ಪರ 129 ಟಿ20 ಪಂದ್ಯಗಳನ್ನು ಆಡಿದ್ದು, ಫ್ರಾಂಚೈಸಿ ಕ್ರಿಕೆಟ್ ಲೀಗ್ಗಳಲ್ಲಿ ಭಾಗವಹಿಸುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಕಾನ್ಪುರ: ಬಾಂಗ್ಲಾದೇಶದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಟಿ20 ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ತವರಿನಲ್ಲಿ ವಿದಾಯ ಪಂದ್ಯ ನೀಡದಿದ್ದರೆ ಕಾನ್ಪುರದಲ್ಲಿ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ತನ್ನ ಕೊನೆಯ ಪಂದ್ಯವಾಗಲಿದೆ ಎಂದು ಹೇಳಿದ್ದಾರೆ.
ಭಾರತ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮುನ್ನಾ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.ಶಕೀಬ್ ಅಲ್ ಹಸನ್, ಬಾಂಗ್ಲಾದೇಶ ಪರ 129 ಟಿ20 ಪಂದ್ಯಗಳನ್ನು ಆಡಿದ್ದು, ಫ್ರಾಂಚೈಸಿ ಕ್ರಿಕೆಟ್ ಲೀಗ್ಗಳಲ್ಲಿ ಭಾಗವಹಿಸುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.
T20 ವಿಶ್ವಕಪ್ನಲ್ಲಿ ನನ್ನ ಕೊನೆಯ T20 ಪಂದ್ಯ ಆಡಿದ್ದೇನೆ. ಆಯ್ಕೆದಾರರೊಂದಿಗೆ ಇದನ್ನು ಚರ್ಚಿಸಿದ್ದೇವೆ. 2026 ರ ವಿಶ್ವಕಪ್ ಹಿನ್ನೆಲೆಯಲ್ಲಿ ಟಿ-20 ಮಾದರಿ ಕ್ರಿಕೆಟ್ ನಿಂದ ಹೊರಹೋಗಲು ಇದು ಸರಿಯಾದ ಸಮಯವಾಗಿದೆ. BCB ಕೆಲವು ಶ್ರೇಷ್ಠ ಆಟಗಾರರನ್ನು ಹುಡುಕಲಿದ್ದು, ನಾವು ಉತ್ತಮ ಪ್ರದರ್ಶನ ನೀಡುತ್ತೇವೆ ಎಂದು ಶಕೀಬ್ ಹೇಳಿದರು.
ಬಾಂಗ್ಲಾದೇಶದ ಮೀರ್ಪುರದಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. 69 ಟೆಸ್ಟ್ಗಳಲ್ಲಿ ಕಾಣಿಸಿಕೊಂಡಿರುವ ಶಕೀಬ್, 4,453 ರನ್ ಮತ್ತು 242 ವಿಕೆಟ್ ಪಡೆದಿದ್ದಾರೆ.
ಮಿರ್ಪುರದಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡುವ ಆಸೆಯನ್ನು ಬಿಸಿಬಿಗೆ ವ್ಯಕ್ತಪಡಿಸಿದ್ದೇನೆ. ಅವರು ಒಪ್ಪಿಕೊಂಡಿದ್ದಾರೆ. ಒಂದು ವೇಳೆ ಅದು ಆಗದಿದ್ದರೆ, ಕಾನ್ಪುರದಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯ ನನ್ನ ಕೊನೆಯದಾಗಲಿದೆ ಎಂದು ಅವರು ಹೇಳಿದರು.
ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿಯ ಸಂದರ್ಭದಲ್ಲಿ ಶಾಕಿಬ್ ಅವರನ್ನು ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿತ್ತು. ಶಕೀಬ್ ಅವಾಮಿ ಲೀಗ್ ಪಕ್ಷದಿಂದ ಸಂಸತ್ತಿನ ಸದಸ್ಯರಾಗಿದ್ದರು. ತವರಿನಲ್ಲಿ ವಿದಾಯ ಪಂದ್ಯಕ್ಕಾಗಿ ಶಕೀಬ್ ಅವರ ಮನವಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ನೋಡಲು ಕ್ರಿಕೆಟ್ ಜಗತ್ತು ಕಾಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



