ಕ್ರಿಕೆಟ್

ಅನಿಲ್ ಕುಂಬ್ಳೆಯ ಮತ್ತೊಂದು ದಾಖಲೆ ಮುರಿದ ಸ್ಪಿನ್ ಕಿಂಗ್ ಆರ್. ಅಶ್ವಿನ್!

ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮೊದಲ ದಿನದಾಟದ ಭೋಜನ ವಿರಾಮದ ನಂತರ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಲೆಗ್ ಅವರನ್ನು ಎಲ್ ಬಿ ಬಲೆಗೆ ಕೆಡವಿದ ಅಶ್ವಿನ್ ಅನಿಲ್ ಕುಂಬ್ಳೆ ಅವರ ಮತ್ತೊಂದು ದಾಖಲೆಯನ್ನು ಮುರಿದರು.

ಅನಿಲ್ ಕುಂಬ್ಳೆಯ ಮತ್ತೊಂದು ದಾಖಲೆ ಮುರಿದ ಸ್ಪಿನ್ ಕಿಂಗ್ ಆರ್. ಅಶ್ವಿನ್!
ಆರ್.ಅಶ್ವಿನ್
Published On :

ಕಾನ್ಪುರ: ಶುಕ್ರವಾರ ನಡೆದ ಬಾಂಗ್ಲಾದೇಶ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಭಾರತದ ಸ್ಪಿನ್ ಕಿಂಗ್ ಆರ್. ಅಶ್ವಿನ್ ಮತ್ತೊಂದು ದಾಖಲೆ ಬರೆದಿದ್ದಾರೆ.

ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮೊದಲ ದಿನದಾಟದ ಭೋಜನ ವಿರಾಮದ ನಂತರ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಲೆಗ್ ಅವರನ್ನು ಎಲ್ ಬಿ ಬಲೆಗೆ ಕೆಡವಿದ ಅಶ್ವಿನ್ ಅನಿಲ್ ಕುಂಬ್ಳೆ ಅವರ ಮತ್ತೊಂದು ದಾಖಲೆಯನ್ನು ಮುರಿದರು.

102 ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಅಶ್ವಿನ್, 23. 69 ಸರಾಸರಿಯಲ್ಲಿ 523 ವಿಕೆಟ್ ಪಡೆದರು. ಅವರು ಏಷ್ಯಾದಲ್ಲಿ ಆಡಿದ 71 ಟೆಸ್ಟ್‌ಗಳಲ್ಲಿ ದಾಖಲೆಯ 420 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಉಪ ಖಂಡದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ ಎನಿಸಿಕೊಂಡರು. ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ 419 ವಿಕೆಟ್‌ಗಳನ್ನು ಪಡೆದಿದ್ದಾರೆ.

ಟೆಸ್ಟ್ ವೃತ್ತಿಜೀವನದಲ್ಲಿ ನಂಬಲಾಗದಷ್ಟು 800 ವಿಕೆಟ್‌ಗಳನ್ನು ಪಡೆದಿರುವ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 612 ವಿಕೆಟ್‌ಗಳೊಂದಿಗೆ ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಸ್ಪಿನ್ನರ್ ಎಂಬ ಖ್ಯಾತಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.