ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ; ಪ್ರಶಸ್ತಿ ಪಡೆಯುವುದು ನನ್ನ ಕನನಸಾಗಿತ್ತು ಎಂದ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.

ನವದೆಹಲಿ: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.
ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು.
'ಈ ಪ್ರಶಸ್ತಿ ಪಡೆಯುವುದೇ ಪ್ರತಿಯೊಬ್ಬ ಆಟಗಾರರ ಜೀವನದ ಕನಸಾಗಿರುತ್ತದೆ. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ. ನಾನು ಕೂಡ ಪ್ರಶಸ್ತಿ ಪಡೆಯಬೇಕೆಂಬ ಕನಸು ನನ್ನದಾಗಿತ್ತು. ಇದೀಗ ನನಗೂ ಪ್ರಶಸ್ತಿ ಸಿಕ್ಕಿರುವುದು ಸಂತಸ ನೀಡಿದೆ' ಎಂದು ಕ್ರಿಕೆಟಿಗ ಶಮಿ ಎಎನ್‌ಐಗೆ ತಿಳಿಸಿದ್ದಾರೆ.

ವಿಶ್ವಕಪ್ 2023 ರಲ್ಲಿ ಮೊದಲಿಗೆ ಮೊಹಮ್ಮದ್ ಶಮಿ ಅವರನ್ನು ನಾಲ್ಕು ಪಂದ್ಯಗಳಿಂದ ಹೊರಗಿಡಲಾಗಿತ್ತು. 19ರಂದು ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು ಗಾಯಗೊಂಡ ಬಳಿಕ ಶಮಿ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದಿದ್ದರು. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಪರ 5 ವಿಕೆಟ್‌ಗಳನ್ನು ಪಡೆದು ಗೆಲುವಿಗೆ ಕಾರಣರಾಗಿದ್ದರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ಅಂದರೆ 24 ವಿಕೆಟ್‌ಗಳನ್ನು ಗಳಿಸಿ ಬೇಷ್ ಎನ್ನಿಸಿಕೊಂಡಿದ್ದರು.
2023 ರಲ್ಲಿ ಒಟ್ಟು 26 ಅಥ್ಲೀಟ್‌ಗಳು ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಅರ್ಜುನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಪಟ್ಟಿಯಲ್ಲಿ 2023ರ ಏಷ್ಯನ್ ಗೇಮ್ಸ್‌ನ ಅಥ್ಲೀಟ್‌ಗಳೇ ಪ್ರಾಬಲ್ಯ ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


