IPL 2025: RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ, Video Viral
ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.

ಬೆಂಗಳೂರು: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.
ಈ ವೇಳೆ ಕ್ರೀಡಾಂಗಣದಿಂದ ಅಭಿಮಾನಿಯೊಬ್ಬನನ್ನು ಹೊರದಬ್ಬಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಮ್ಮ ನೆಟ್ಟಿನ ತಂಡದ ಬಾವುಟಗಳನ್ನು ಕ್ರೀಡಾಂಗಣಕ್ಕೆ ತೆಗೆದುಕೊಂಡು ಹೋಗಲು ಅವಕಾಶವಿದೆ. ಆದರೆ ಇಲ್ಲಿ ಅಭಿಮಾನಿಯೊಬ್ಬ ದರ್ಶನ್ ಪೋಟೋವನ್ನು ತೆಗೆದುಕೊಂಡು ಕ್ರೀಡಾಂಗಣದ ಒಳಗೆ ಹೋಗಿದ್ದನು. ಇದನ್ನು ಗಮನಿಸಿದ ಸಿಬ್ಬಂದಿ ಆತನನ್ನು ಕ್ರೀಡಾಂಗಣದಿಂದ ಹೊರಕಳುಹಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಭೀಕರ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಸೆರೆ ಮನೆವಾಸ ಅನುಭವಿಸಿದ್ದು ನಂತರ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಸದ್ಯ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



