ಕ್ರಿಕೆಟ್

IPL 2025: RCB ವಿರುದ್ಧ ಕನ್ನಡಿಗ ಕೆಎಲ್ ರಾಹುಲ್ ಅಬ್ಬರ; ಪೋಸ್ಟ್ ಹಂಚಿಕೊಂಡ ಪತ್ನಿ ಅಥಿಯಾ ಶೆಟ್ಟಿ

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಅಜೇಯ 93 ರನ್ ಗಳಿಸಿದರು. ಈ ಪಂದ್ಯಾವಳಿಯಲ್ಲಿ ಇದು ಅವರ ಸತತ ಎರಡನೇ ಅರ್ಧಶತಕ.

IPL 2025: RCB ವಿರುದ್ಧ ಕನ್ನಡಿಗ ಕೆಎಲ್ ರಾಹುಲ್ ಅಬ್ಬರ; ಪೋಸ್ಟ್ ಹಂಚಿಕೊಂಡ ಪತ್ನಿ ಅಥಿಯಾ ಶೆಟ್ಟಿ
ಕೆಎಲ್ ರಾಹುಲ್-ಅಥಿಯಾ ಶೆಟ್ಟಿ
Published On :

ನವದೆಹಲಿ: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಾಹುಲ್ ಅವರ ಅದ್ಭುತ ಪ್ರದರ್ಶನದ ನೆರವಿನಿಂದ ಡಿಸಿ ತಂಡ ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಗುರುವಾರ ಐಪಿಎಲ್ 2025ನೇ ಆವೃತ್ತಿಯಲ್ಲಿ ಪಂದ್ಯದ ನಂತರ ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಪತಿಯನ್ನು ಕುರಿತು ವಿಶೇಷವಾದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಅಜೇಯ 93 ರನ್ ಗಳಿಸಿದರು. ಈ ಪಂದ್ಯಾವಳಿಯಲ್ಲಿ ಇದು ಅವರ ಸತತ ಎರಡನೇ ಅರ್ಧಶತಕ. ಐಪಿಎಲ್ 2025ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಓಟವನ್ನು ಮುಂದುವರೆಸಿದ್ದು, ಸತತವಾಗಿ 4 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ದೆಹಲಿ ತಂಡದ ಗೆಲುವಿನ ನಂತರ ಕೆಎಲ್ ರಾಹುಲ್ ಬ್ಯಾಟ್ ಎತ್ತಿ ಸಂಭ್ರಮಿಸುತ್ತಿರುವ ಚಿತ್ರವನ್ನು ಅಥಿಯಾ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, 'ಈ ವ್ಯಕ್ತಿ, ಉಫ್!' ಎಂದು ಬರೆದಿದ್ದಾರೆ.

ಆಥಿಯಾ ಹಂಚಿಕೊಂಡ ಪೋಸ್ಟ್
ಆಥಿಯಾ ಹಂಚಿಕೊಂಡ ಪೋಸ್ಟ್

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಸ್ಫೋಟಕ ಆರಂಭ ಪಡೆಯಿತಾದರೂ, ಫಿಲ್ ಸಾಲ್ಟ್ ರನೌಟ್ ಆಗುತ್ತಿದ್ದಂತೆ ಪಂದ್ಯದ ದಿಕ್ಕೇ ಬದಲಾಯಿತು. ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 163 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರ್‌ಸಿಬಿ ನೀಡಿದ 164 ರನ್‌ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, 53 ಎಸೆತಗಳಲ್ಲಿ 93 ರನ್ ಗಳಿಸಿ ಅಜೇಯರಾಗಿ ಉಳಿದ ಕೆಎಲ್ ರಾಹುಲ್ ಅವರ ಅದ್ಭುತ ಪ್ರದರ್ಶನ ತಂಡದ ಗೆಲುವಿಗೆ ನೆರವಾಯಿತು. 13 ಎಸೆತಗಳು ಬಾಕಿ ಇರುವಾಗಲೇ ಡೆಲ್ಲಿ ತಂಡ ಗೆಲುವಿನ ನಗೆ ಬೀರಿತು.

ಈ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿದ್ದ ಆರ್‌ಸಿಬಿ ಆಡಿರುವ ಐದು ಪಂದ್ಯಗಳಲ್ಲಿ ತವರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಸೋತಿದೆ. ಹೊರಗೆ ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಕೆಎಲ್ ರಾಹುಲ್ ಮತ್ತು ಅಥಿಯಾ ದಂಪತಿಗೆ ಮಾರ್ಚ್ 24 ರಂದು ಹೆಣ್ಣು ಮಗು ಜನನವಾಗಿದೆ. 2023ರ ಜನವರಿಯಲ್ಲಿ ವಿವಾಹವಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.