Thala For Reason: 'ಯಪ್ಪಾ.. ಹಿಂಗೂ ರನೌಟ್ ಮಾಡ್ಬಹುದಾ'; LSG ವಿರುದ್ಧ CSK ನಾಯಕ MS Dhoni ರನೌಟ್ Video ವೈರಲ್
ಕಳೆದ ಕೆಲ ಪಂದ್ಯಗಳಲ್ಲಿ ಅದ್ಭುತ ಸ್ಟಂಪಿಂಗ್ನೊಂದಿಗೆ ಗಮನ ಸೆಳೆದಿದ್ದ ಧೋನಿ, ಈ ಬಾರಿ ವಿಚಿತ್ರ ರೀತಿಯಲ್ಲಿ ರನೌಟ್ ಮಾಡಿ ಮತ್ತೆ ಅಭಿಮಾನಿಗಳು ಆಶ್ಚರ್ಯಚಕಿತರಾಗುವಂತೆ ಮಾಡಿದ್ದಾರೆ.

ಲಖನೌ: ಐಪಿಎಲ್ ಟೂರ್ನಿಯ ನಿನ್ನೆಯ ಎಲ್ ಸಿಜಿ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ವಿಚಿತ್ರ ರನೌಟ್ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.
ಲಖನೌನ ಎಕಾನ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ CSK ನಾಯಕ ಹಾಗೂ ವಿಕೆಟ್ ಕೀಪರ್ ವಿಚಿತ್ರ ರನೌಟ್ ಮಾಡಿದ್ದಾರೆ. ಹೌದು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 43 ವರ್ಷದ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ವಿಕೆಟ್ ಕೀಪಿಂಗ್ ಮ್ಯಾಜಿಕ್ ಮುಂದುವರೆದಿದೆ.
ಕಳೆದ ಕೆಲ ಪಂದ್ಯಗಳಲ್ಲಿ ಅದ್ಭುತ ಸ್ಟಂಪಿಂಗ್ನೊಂದಿಗೆ ಗಮನ ಸೆಳೆದಿದ್ದ ಧೋನಿ, ಈ ಬಾರಿ ವಿಚಿತ್ರ ರೀತಿಯಲ್ಲಿ ರನೌಟ್ ಮಾಡಿ ಮತ್ತೆ ಅಭಿಮಾನಿಗಳು ಆಶ್ಚರ್ಯಚಕಿತರಾಗುವಂತೆ ಮಾಡಿದ್ದಾರೆ.
ಅಂತಿಮ ಓವರ್ ನಲ್ಲಿ ಧೋನಿ ಮ್ಯಾಜಿಕಲ್ ರನೌಟ್
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಕೊನೆಯ ಓವರ್ನಲ್ಲಿ ಅಬ್ದುಲ್ ಸಮದ್ ಬ್ಯಾಟಿಂಗ್ ಮಾಡುತ್ತಿದ್ದರು. ಇತ್ತ ಸಿಎಸ್ಕೆ ಪರ ಮತೀಶ ಪತಿರಾಣ ಬೌಲಿಂಗ್ ಮಾಡುತ್ತಿದ್ದರು. 20ನೇ ಓವರ್ನ 2ನೇ ಎಸೆತವನ್ನು ಪತಿರಾಣ ವೈಡ್ ಎಸೆದಿದ್ದಾರೆ. ಚೆಂಡು ದೂರ ಸಾಗಿ ವಿಕೆಟ್ ಕೀಪರ್ ಕೈ ಸೇರುವಷ್ಟರಲ್ಲಿ ಒಂದು ರನ್ ಕಲೆಹಾಕಲು ನಾನ್ ಸ್ಟ್ರೈಕ್ನಿಂದ ರಿಷಭ್ ಪಂತ್ ಓಡಿದ್ದಾರೆ. ಅತ್ತ ಕಡೆಯಿಂದ ಅಬ್ದುಲ್ ಸಮದ್ ನಾನ್ ಸ್ಟ್ರೈಕ್ನತ್ತ ಓಡಿ ಬರುವಷ್ಟರಲ್ಲಿ ಧೋನಿ ಅಂಡರ್ ಆರ್ಮ್ ಥ್ರೋ ಎಸೆದರು. ಚೆಂಡು ಗಾಳಿಯಲ್ಲಿ ತೇಲುತ್ತಾ ಬಂದು ನೇರವಾಗಿ ವಿಕೆಟ್ಗೆ ಬಡಿದಿದೆ.
ವಿಡಿಯೋ ವೈರಲ್
ಈ ಅದ್ಭುತ ಅಂಡರ್ ಆರ್ಮ್ ಥ್ರೋ ರನೌಟ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಧೋನಿಯ ಕೀಪಿಂಗ್ ಚಮತ್ಕಾರಕ್ಕೆ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಸತತ ಸೋಲಿನ ಬಳಿಕ ಕೊನೆಗೂ ಗೆದ್ದ ಚೆನ್ನೈ
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು 166 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 19.3 ಓವರ್ಗಳಲ್ಲಿ 168 ರನ್ ಬಾರಿಸಿ 5 ವಿಕೆಟ್ಗಳ ಜಯ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


