IPL 2025: ಪಂದ್ಯ ಟೈ; ಸೂಪರ್ ಓವರ್ ನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್ಗುರ್ಕ್ 9 ರನ್ ಗಳಿಸಿದಾಗ ಜೈಸ್ವಾಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2025 ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ನಡುವಿನ ಪಂದ್ಯ ಟೈ ಆಗಿದ್ದು, ನಂತರ ನಡೆದ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್ಗುರ್ಕ್ 9 ರನ್ ಗಳಿಸಿದಾಗ ಜೈಸ್ವಾಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಅಭಿಷೇಕ್ ಪೊರೆಲ್ 1 ಸಿಕ್ಸರ್, 5 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 49 ರನ್ ಗಳಿಸಿದಾಗ ಹಸರಂಗ ಬೌಲಿಂಗ್ ನಲ್ಲಿ ಪರಾಗ್ ಗೆ ಕ್ಯಾಚ್ ನೀಡುವ ಮೂಲಕ ಅರ್ಧ ಶತಕದಿಂದ ವಂಚಿತರಾದರು. ಕರುಣ್ ನಾಯರ್ ಶೂನ್ಯಕ್ಕೆ ರನ್ ಔಟಾಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ನಂತರ ಬಂದ ಕೆಎಲ್ ರಾಹಲ್ ಎರಡು ಸಿಕ್ಸರ್,ಎರಡು ಬೌಂಡರಿಗಳೊಂದಿಗೆ 32 ಎಸೆತಗಳಲ್ಲಿ 38 ಮತ್ತು ನಾಯಕ ಅಕ್ಸರ್ ಪಟೇಲ್ 34 ರನ್ ಗಳಿಸಿದರು. ನಂತರ ತ್ರಿಸ್ಟನ್ ಸ್ಟುಬ್ಸ್ ಹಾಗೂ ಅಶುತೋಷ್ ಶರ್ಮಾ ಔಟಾಗದೆ ಕ್ರಮವಾಗಿ 34 ಮತ್ತು 15 ರನ್ ಗಳಿಸುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕಿತು. ರಾಜಸ್ಥಾನ ರಾಯಲ್ಸ್ ಪರ ಜೋಪ್ರಾ ಅರ್ಚರ್ 2 ವಿಕೆಟ್ ಪಡೆದರೆ, ಮಹೀಶ್ ತೀಕ್ಷ್ಣ ಮತ್ತು ವನಿದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 189 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 4 ಸಿಕ್ಸರ್, 3 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 51 ರನ್ ಗಳಿಸಿ, ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಔಟಾದರು. ನಾಯಕ ಸಂಜು ಸ್ಯಾಮ್ಸನ್ 31 ರನ್ ಗಳಿಸಿದಾಗ ಗಾಯಗೊಂಡು ಅರ್ಧಕ್ಕೆ ಪಂದ್ಯದಿಂದ ಹೊರಗೆ ಹೋದರು. ಬಳಿಕ ಬಂದ ರಿಯಾನ್ ಪರಾಗ್ 8, ನಿತೀಶ್ ರಾಣಾ 51, ಧ್ರುವ ಜುರೆಲ್ 26 ಮತ್ತು ಶಿಮ್ರಾನ್ ಹೆಟ್ಮೆಯರ್ ಔಟಾಗದೇ 15 ರನ್ ಗಳಿಸುವ ಮೂಲಕ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಪಂದ್ಯ ಟೈ ಆಯಿತು.ನಂತರ ನಡೆದ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



