ಟೀಂ ಇಂಡಿಯಾ ಸಹಾಯಕ ಕೋಚ್ ಸ್ಥಾನದಿಂದ ಅಭಿಷೇಕ್ ನಾಯರ್ ಕಿತ್ತೆಸೆದ ಬಿಸಿಸಿಐ! ಇದೇ ಕಾರಣ..
ಗಂಭೀರ್, ಆಯ್ಕೆಗಾರರ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನೊಳಗೊಂಡ ಸಮನ್ವಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮುಂಬೈ: ಟೀಂ ಇಂಡಿಯಾದ ಸಹಾಯಕ ಕೋಚ್ ಸ್ಥಾನದಿಂದ ಅಭಿಷೇಕ್ ನಾಯರ್ ಅವರನ್ನು ಬಿಸಿಸಿಐ ತೆಗೆದುಹಾಕಿದೆ. ಮಾಜಿ ಆಲ್ ರೌಂಡರ್ ಆಗಿರುವ ಅಭಿಷೇಕ್ ನಾಯರ್, ಕಳೆದ ವರ್ಷ ಜುಲೈ ನಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಸಹಾಯಕ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.
ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಸರಣಿ ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಸೋತಿತ್ತು. ಇದರಿಂದಾಗಿ ಅವರನ್ನು ಸಹಾಯಕ ಕೋಚ್ ಸ್ಥಾನದಿಂದ ತೆಗೆಯಲಾಗಿದೆ ಎಂದು ಕಾರಣ ನೀಡಲಾಗಿದೆ.
ಗಂಭೀರ್, ಆಯ್ಕೆಗಾರರ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನೊಳಗೊಂಡ ಸಮನ್ವಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಆದರೆ ನೆರವು ತಂಡದ ಪ್ರಮುಖ ಸಿಬ್ಬಂದಿ ಮತ್ತು ಭಾರತ ತಂಡದ ಹಿರಿಯ ಆಟಗಾರನ ಜೊತೆ ಭಿನ್ನಾಭಿಪ್ರಾಯ ಈ ಕ್ರಮಕ್ಕೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.
ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಮತ್ತು ಸ್ಟ್ರೆಂಥ್ ಮತ್ತು ಕಂಡಿಷನಿಂಗ್ ಕೋಚ್ ಸೋಹಮ್ ದೇಸಾಯಿ ಕೂಡಾ ಮೂರು ವರ್ಷಗಳ ಅವಧಿ ಪೂರೈಸಿದ್ದು, ಅವರೂ ತಮ್ಮ ಹುದ್ದೆ ಕಳೆದುಕೊಳ್ಳುವ ನಿರೀಕ್ಷಿಯಿದೆ. ಬಿಸಿಸಿಐನ ಪ್ರಮಾಣಿತ ಕಾರ್ಯಾಚರಣೆ ವಿಧಾನದ ಅನ್ವಯ ನೆರವು ಸಿಬ್ಬಂದಿಯ ಅವಧಿಯನ್ನು ಮೂರು ವರ್ಷಗಳಿಗೆ ಸಿಮೀತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



