ಕ್ರಿಕೆಟ್

IPL 2025: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 4 ವಿಕೆಟ್ ಗೆಲುವು!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.

IPL 2025: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 4 ವಿಕೆಟ್ ಗೆಲುವು!
ಮುಂಬೈ ಮತ್ತು ಹೈದರಾಬಾದ್ ನಡುವಿನ ಪಂದ್ಯದ ಚಿತ್ರ
Published On :

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ಟೂರ್ನಿಯ 33ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 4 ವಿಕೆಟ್ ಗಳ ಅಂತರದಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ 40 ರನ್ ಗಳಿಸಿದಾಗ ಪಾಂಡ್ಯ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಟ್ರಾವಿಸ್ ಹೆಡ್ ಕೂಡಾ 28 ರನ್ ಗಳಿಸಿ ಕ್ಯಾಚ್ ನೀಡಿ ಫೆವಿಲಿಯನ್ ಗೆ ಹೆಜ್ಜೆ ಹಾಕಿದರು.

ಬಳಿಕ ಬಂದ ಇಶಾನ್ ಕಿಶಾನ್ ಕೇವಲ 2 ರನ್ ಗಳಿಗೆ ಔಟಾದರೆ, ನಿತೀಶ್ ಕುಮಾರ್ ರೆಡ್ಡಿ 19, ಹೆನ್ರಿಕ್ ಕ್ಲಾಸೆನ್ 37, ಅನಿಕೇತ್ ವರ್ಮಾ 18, ನಾಯಕ ಪ್ಯಾಟ್ ಕಮ್ಮಿನ್ಸ್ ಕೇವಲ 8 ರನ್ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ ನಿಗದಿತ ಓವರ್ ಗಳಲ್ಲಿ 162 ರನ್ ಗಳಿಸಿದ ಸನ್ ರೈಸರ್ಸ್ ಹೈದರಾಬಾದ್, ಮುಂಬೈ ಗೆಲ್ಲಲು 163 ರನ್ ಗಳ ಟಾರ್ಗೆಟ್ ನೀಡಿತು.

ಮುಂಬೈ ಇಂಡಿಯನ್ಸ್ ಪರ ವಿಲ್ ಜಾಕ್ಸ್ 2 ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.

ಸನ್ ರೈಸರ್ಸ್ ಹೈದರಾಬಾದ್ ನೀಡಿದ 163 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ ಪರ ರಿಯಾನ್ ರಿಕೆಲ್ಟನ್ 31, ರೋಹಿತ್ ಶರ್ಮಾ 26, ವಿಲ್ ಜಾಕ್ಸ್ 36 ರನ್ ಗಳಿಸಿದರು. ಸೂರ್ಯ ಕುಮಾರ್ ಯಾದವ್ 26, ತಿಲಕ್ ವರ್ಮಾ ಔಟಾಗದೇ 17, ನಾಯಕ ಹಾರ್ದಿಕ್ ಪಾಂಡ್ಯ 21 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ 17.5 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸುವುದರೊಂದಿಗೆ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.