IPL 2025: ಪಾಯಿಂಟ್ಸ್ ಟೇಬಲ್ನಲ್ಲಿ ಮತ್ತೆ DC ಅಗ್ರಸ್ಥಾನಕ್ಕೆ; ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?
ಸೂಪರ್ ಓವರ್ನಲ್ಲಿ ಬ್ಯಾಟ್ ಮಾಡಿದ ಆರ್ಆರ್ 11 ರನ್ ಗಳಿಸಿತು. ಬಳಿಕ ಡಿಸಿ ತಂಡದ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಈ ಮೊತ್ತವನ್ನು ಗಳಿಸುವ ಮೂಲಕ ತಂಡಕ್ಕೆ ಗೆಲುವು ಸಿಕ್ಕಿತು.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವು ರಾಜಸ್ಥಾನ ರಾಯಲ್ಸ್ (ಆರ್ಆರ್) ವಿರುದ್ಧ ಸೂಪರ್ ಓವರ್ನಲ್ಲಿ ಗೆಲುವು ಸಾಧಿಸಿದೆ. 189 ರನ್ಗಳ ಗುರಿ ಬೆನ್ನಟ್ಟುತ್ತಿದ್ದ ಆರ್ಆರ್ಗೆ ಗೆಲ್ಲಲು ಅಂತಿಮ ಓವರ್ನಲ್ಲಿ ಒಂಬತ್ತು ರನ್ಗಳು ಬೇಕಾಗಿದ್ದಾಗ, ಸ್ಟಾರ್ಕ್ ಕೇವಲ 8 ರನ್ ನೀಡಿದರು. ಹೀಗಾಗಿ, ಸೂಪರ್ ಓವರ್ ಆಡಬೇಕಾಯಿತು.
ಸೂಪರ್ ಓವರ್ನಲ್ಲಿ ಬ್ಯಾಟ್ ಮಾಡಿದ ಆರ್ಆರ್ 11 ರನ್ ಗಳಿಸಿತು. ಬಳಿಕ ಡಿಸಿ ತಂಡದ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಈ ಮೊತ್ತವನ್ನು ಗಳಿಸುವ ಮೂಲಕ ತಂಡಕ್ಕೆ ಗೆಲುವು ಸಿಕ್ಕಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ಐದು ಗೆಲುವುಗಳೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆದರೆ, ಆರ್ಆರ್ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 2ರಲ್ಲಿ ಜಯ ಸಾಧಿಸುವ ಮೂಲಕ ನಾಲ್ಕು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.
ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಆಡಿರುವ 6 ಪಂದ್ಯಗಳಲ್ಲಿ ತಲಾ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ 2, 3 ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಲಕ್ನೋ ಸೂಪರ್ ಜೈಂಟ್ಸ್ ತಂಡ 7 ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸುವ ಮೂಲಕ 6ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ ತಂಡಗಳು ಕ್ರಮವಾಗಿ 7, 8, 9 ಮತ್ತು 10ನೇ ಸ್ಥಾನದಲ್ಲಿವೆ.
ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಲೀಡರ್ಬೋರ್ಡ್ಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಉಪ ನಾಯಕ ನಿಕೋಲಸ್ ಪೂರನ್ ಆರೆಂಜ್ ಕ್ಯಾಪ್ ಮಾಲೀಕರಾಗಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಪಿನ್ನರ್ ನೂರ್ ಅಹ್ಮದ್ ಪರ್ಪಲ್ ಕ್ಯಾಪ್ ಪಡೆದಿದ್ದಾರೆ. ಕೆಕೆಆರ್ ಬೌಲರ್ಗಳಾದ ಹರ್ಷಿತ್ ರಾಣಾ ಮತ್ತು ವರುಣ್ ಚಕ್ರವರ್ತಿ ತಲಾ 10 ವಿಕೆಟ್ಗಳನ್ನು ಪಡೆದು ನಂತರದ ಸ್ಥಾನಗಳಲ್ಲಿದ್ದಾರೆ.

IPL 2025, RR vs DC: ಒಂದೇ ಓವರ್ನಲ್ಲಿ 11 ಎಸೆತ; ಪಂದ್ಯ ಸೋತರೂ ಕೆಟ್ಟ ದಾಖಲೆ ಮಾಡಿದ ರಾಜಸ್ಥಾನ್ ರಾಯಲ್ಸ್ ವೇಗಿ
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿತು.
ಡೆಲ್ಲಿ ನೀಡಿದ 189 ರನ್ಗಳ ಗುರಿ ಬೆನ್ನಟ್ಟಿದ ಆರ್ಆರ್ ತಂಡ ಯಶಸ್ವಿ ಜೈಸ್ವಾಲ್ (37 ಎಸೆತಗಳಲ್ಲಿ 51) ಮತ್ತು ನಿತೀಶ್ ರಾಣಾ (28 ಎಸೆತಗಳಲ್ಲಿ 51) ಅವರ ಆಕರ್ಷಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಉತ್ತಮ ಆರಂಭ ಪಡೆಯಿತು. ಕೊನೆಯ ಓವರ್ನಲ್ಲಿ ಗೆಲ್ಲಲು 9 ರನ್ಗಳ ಅಗತ್ಯವಿದ್ದಾಗ ಮಿಚೆಲ್ ಸ್ಟಾರ್ಕ್ ಕೇವಲ 8 ರನ್ ನೀಡಿದರು. ಆಗ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್ ಕಳೆದುಕೊಂಡು 188 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಸೂಪರ್ ಓವರ್ ಆಡಬೇಕಾಯಿತು. ಸೂಪರ್ ಓವರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

