IPL 2025: RR ವಿರುದ್ಧ LSGಗೆ ರೋಚಕ ಗೆಲುವು
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್, ಏಡನ್ ಮರ್ಕ್ರಂ(66 ರನ್) ಹಾಗೂ ಆಯುಷ್ ಬದೋನಿ(50) ಅವರ ಅರ್ಧ ಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 180 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಜೈಪುರ: ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ನ 36ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್, ಏಡನ್ ಮರ್ಕ್ರಂ(66 ರನ್) ಹಾಗೂ ಆಯುಷ್ ಬದೋನಿ(50) ಅವರ ಅರ್ಧ ಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 180 ರನ್ ಗಳ ಬೃಹತ್ ಮೊತ್ತ ಸೇರಿಸಿತು. ಕೊನೆಯ ಓವರ್‌ನಲ್ಲಿ ಅಬ್ದುಲ್ ಸಮದ್ ಅವರು ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿ ಅಬ್ಬರಿಸಿದರು.
ಗೆಲುವಿಗೆ 181 ರನ್ ಗಳ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ ಎಸೆತದಲ್ಲೇ ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ಇಡೀ ಜಗತ್ತನ್ನೇ ಅಚ್ಚರಿಗೊಳಿಸಿದರು.
ಆವೇಶ್ ಖಾನ್ ಹಾಗೂ ಜೈಸ್ವಾಲ್ ಅವರ ಅರ್ಧ ಶತಕದ ಹೊರತಾಗಿಯೂ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 178 ರನ್ ಗಳಿಸುವ ಮೂಲಕ ಕೇವಲ ಎರಡು ರನ್ ಗಳಿಂದ ಸೋಲು ಒಪ್ಪಿಕೊಂಡಿತು.
ರಾಜಸ್ಥಾನ ಪರವಾಗಿ ವಣಿಂದು ಹಸರಂಗಾ ಅವರು ಎರಡು ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ ಮತ್ತು ಜೋಫ್ರಾ ಅರ್ಚರ್ ತಲಾ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



