IPL 2025: ದಾಖಲೆ ಹೊರತಾಗಿಯೂ ಮೈದಾನದಿಂದ ಕಣ್ಣೀರಾಕುತ್ತಲೇ ಹೊರನಡೆದ ವೈಭವ್ ಸೂರ್ಯವಂಶಿ!
14 ವರ್ಷ 23 ದಿನಗಳ ವಯಸ್ಸಿನ ಈ ಯುವ ಪ್ರತಿಭೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಮೊದಲ ಎಸೆತದಲ್ಲೇ ಅವರು ಅನುಭವಿ ಶಾರ್ದೂಲ್ ಠಾಕೂರ್ ಅವರ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಶನಿವಾರ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದು, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
14 ವರ್ಷ 23 ದಿನಗಳ ವಯಸ್ಸಿನ ಈ ಯುವ ಪ್ರತಿಭೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಮೊದಲ ಎಸೆತದಲ್ಲೇ ಅವರು ಅನುಭವಿ ಶಾರ್ದೂಲ್ ಠಾಕೂರ್ ಅವರ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಕೇವಲ 20 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಭರವಸೆ ಮೂಡಿಸಿದ್ದಾರೆ. ಅವರ ಇನಿಂಗ್ಸ್‌ನಲ್ಲಿ ಮೂರು ಸಿಕ್ಸರ್ ಮತ್ತು ಎರಡು ಬೌಂಡರಿ ಸೇರಿದ್ದವು. ಈಡನ್ ಮಾರ್ಕ್ರಮ್ ಅವರ ಎಸೆತದಲ್ಲಿ ಔಟ್ ಆದಾಗ ವೈಭವ್ ಭಾವುಕರಾಗಿದ್ದರು ಮತ್ತು ಕಣ್ಣೀರು ಹೊರೆಸಿಕೊಳ್ಳುತ್ತಲೇ ಮೈದಾನದಿಂದ ಹೊರಬಂದರು.
ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿತು. ಕೊನೆಯ ಓವರ್‌ವರೆಗೂ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಆರ್ ತಂಡ ಸೋಲು ಸತತ ಸೋಲು ಕಂಡಿತು.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಏಡೆನ್ ಮಾರ್ಕ್ರಮ್ 66, ಆಯುಷ್ ಬದೋನಿ 50 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಮೊತ್ತ ಕಲೆಹಾಕಲು ನೆರವಾದರು.
ಲಕ್ನೋ ನೀಡಿದ ಈ ಸವಾಲಿನ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 14 ವರ್ಷದ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಪತನದ ವೇಳೆಗೆ 85 ರನ್ ಕಲೆಹಾಕಿತು. ವೈಭವ್ ಸೂರ್ಯವಂಶಿ 34 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 74 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ ಗೆಲುವಿಗೆ 9 ರನ್ ಬೇಕಿದ್ದಾಗ ಡೆಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆವೇಶ್ ಖಾನ್ ಅವರ ಉತ್ತಮ ಬೌಲಿಂಗ್‌ನಿಂದಾಗಿ 2 ರನ್‌ಗಳ ರೋಚಕ ಗೆಲುವು ಸಿಕ್ಕಿತು.
RR ತಂಡ ಆಡಿರುವ 8 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದರೆ, LSG ಆಡಿರುವ 8 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


