ಕ್ರಿಕೆಟ್

IPL 2025: ಶುಭಮನ್ ಗಿಲ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ GT ಭರ್ಜರಿ ಗೆಲುವು

ಇಂದು ಕೊಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡದ ಆರಂಭ ಭರ್ಜರಿಯಾಗಿತ್ತು.

IPL 2025: ಶುಭಮನ್ ಗಿಲ್ ಸ್ಫೋಟಕ ಬ್ಯಾಟಿಂಗ್;  KKR ವಿರುದ್ಧ GT ಭರ್ಜರಿ ಗೆಲುವು
ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್‌
Published On :

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 39ನೇ ಪಂದ್ಯದಲ್ಲಿ ಶುಭಮನ್ ಗಿಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್(GT), ಕೋಲ್ಕತ್ತಾ ನೈಟ್ ರೈಡರ್ಸ್(KKR) ಭರ್ಜರಿ ಗೆಲುವು ಸಾಧಿಸಿದೆ.

ಇಂದು ಕೊಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡದ ಆರಂಭ ಭರ್ಜರಿಯಾಗಿತ್ತು.

ಆರಂಭಿಕರಾದ ಶುಭ್‌ಮನ್‌ ಗಿಲ್‌(90), ಬಿ ಸಾಯಿ ಸುದರ್ಶನ್‌(52) ಹಾಗೂ ಜೋಸ್ ಬಟ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗುಜರಾತ್ ತಂಡ ನಿಗದಿತ 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಬರೋಬ್ಬರಿ 198 ರನ್ ಸೇರಿಸಿತು.

ಗೆಲುವಿಗೆ 199 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಕೆಕೆಆರ್ ತಂಡ, ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 159 ರನ್ ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.