IPL 2025: ರೋಹಿತ್ ಅಬ್ಬರ; SRH ವಿರುದ್ಧ MI ಭರ್ಜರಿ ಗೆಲುವು
ರೋಹಿತ್ ಶರ್ಮಾ ಅವರ ಅರ್ಧ ಶತಕದ ನೆರವಿನಿಂದ 15.4 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 146 ರನ್ ರನ್ ಗಳಿಸುವ ಮೂಲಕ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು.

ಹೈದರಾಬಾದ್: ಹೈದರಾಬಾದ್ ನಲ್ಲಿ ಬುಧವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 41ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್(SRH) ವಿರುದ್ಧ ಮುಂಬೈ ಇಂಡಿಯನ್ಸ್(MI) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದೆ.
ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ, ಹೆನ್ರಿಚ್ ಕ್ಲಾಸೆನ್(71) ಅವರ ದಿಟ್ಟ ಹೋರಾಟದ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಗೆಲುವಿಗೆ 144 ರನ್ ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ(70) ಅವರ ಅರ್ಧ ಶತಕದ ನೆರವಿನಿಂದ 15.4 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 146 ರನ್ ರನ್ ಗಳಿಸುವ ಮೂಲಕ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು.
ಇದು ಮುಂಬೈ ತಂಡದ ಸತತ ನಾಲ್ಕನೇ ಗೆಲುವು ಮತ್ತು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಆದರೆ SRH ರನ್ ರೇಟ್ ಚೆನ್ನೈ ಸೂಪರ್ ಕಿಂಗ್ಸ್‌ಗಿಂತ ಸ್ವಲ್ಪ ಮುಂದಿದ್ದು, ಒಂಬತ್ತನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



