IPL 2025: ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ತವರಿನಲ್ಲಿ RCB ಮೊದಲ ಗೆಲುವು
ವಿರಾಟ್ ಕೊಹ್ಲಿ(70) ಹಾಗೂ ದೇವದತ್ತ ಪಡಿಕ್ಕಲ್(50) ಅವರ ಬಿರುಸಿನ ಅರ್ಧ ಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಬರೋಬ್ಬರಿ 205 ರನ್ ಸೇರಿಸಿತು.

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 42ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್(RR) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನ ಅಂಗಳದಲ್ಲಿ ಮೊದಲ ಗೆಲುವು ದಾಖಲಿಸಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ RCB, ವಿರಾಟ್ ಕೊಹ್ಲಿ(70) ಹಾಗೂ ದೇವದತ್ತ ಪಡಿಕ್ಕಲ್(50) ಅವರ ಬಿರುಸಿನ ಅರ್ಧ ಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಬರೋಬ್ಬರಿ 205 ರನ್ ಸೇರಿಸಿತು.
ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ರಾಯಸ್ಥಾನ ರಾಯಲ್ಸ್, ಯಶಸ್ವಿ ಜೈಸ್ವಾಲ್(49) ಹಾಗೂ ಧ್ರುವ್ ಜುರೆಲ್(47) ಅವರ ದಿಟ್ಟ ಹೋರಾಟದ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇದರೊಂದಿಗೆ ಆರ್ ಸಿಬಿ 11 ರನ್ ಗಳಿಂದ ಗೆಲುವು ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



