IPL 2025: ಚಿನ್ನಸ್ವಾಮಿಯಲ್ಲಿ RR ವಿರುದ್ಧ ಜಯ; RCB ಪ್ಲೇಆಫ್ ಹಾದಿ ಮತ್ತಷ್ಟು ಸುಗಮ!
ಐಪಿಎಲ್ 2025ರ ಆವೃತ್ತಿಯಲ್ಲಿ ಇದುವರೆಗೆ ಆಡಿದ 9 ಪಂದ್ಯಗಳಲ್ಲಿ ಆರ್ಸಿಬಿ 6 ರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ ಜಾಶ್ ಹೇಜಲ್ವುಡ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ತವರಿನಲ್ಲಿ ಈ ಆವೃತ್ತಿಯಲ್ಲಿ ಪಂದ್ಯ ಗೆಲ್ಲುವ ಮೂಲಕ ಬರವನ್ನು ನೀಗಿಸಿದೆ. ಇದೀಗ RCB ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸುವ ಮೂಲಕ 12 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 3ನೇ ಸ್ಥಾನಕ್ಕೇರಿದೆ. ಲೀಗ್ ಹಂತದಲ್ಲಿ ಆರ್ಸಿಬಿ ಐದು ಪಂದ್ಯಗಳನ್ನು ಆಡುವುದು ಬಾಕಿ ಉಳಿದಿದ್ದು, ಎರಡು ಗೆಲುವುಗಳು ರಜತ್ ಪಾಟಿದಾರ್ & ಕಂಪನಿಗೆ ಪ್ಲೇಆಫ್ ಹಾದಿಯನ್ನು ಖಚಿತಪಡಿಸುವ ಸಾಧ್ಯತೆ ಇದೆ.
ಆರ್ಸಿಬಿಯ ಟ್ರ್ಯಾಕ್ ರೆಕಾರ್ಡ್
ಐಪಿಎಲ್ 2025ರ ಆವೃತ್ತಿಯಲ್ಲಿ ಇದುವರೆಗೆ ಆಡಿದ 9 ಪಂದ್ಯಗಳಲ್ಲಿ ಆರ್ಸಿಬಿ 6 ರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆರ್ಸಿಬಿ ತವರಿನಿಂದ ಹೊರಗೆ ಆಡಿರುವ ಎಲ್ಲ ಪಂದ್ಯಗಳನ್ನು ಗೆದ್ದಿದ್ದರೂ, ಗುರುವಾರ ತವರಿನಲ್ಲಿ ತನ್ನ ಮೊದಲ ಗೆಲುವು ಸಾಧಿಸಿತು. ಈ ಹಿಂದೆ ಚಿನ್ನಸ್ವಾಮಿಯಲ್ಲಿ ನಡೆದಿದ್ದ 3 ಪಂದ್ಯಗಳಲ್ಲಿ ಸತತ ಸೋಲು ಕಂಡಿತ್ತು.
ಯಾವುದೇ ತೊಂದರೆಗಳಿಲ್ಲದೆ ಐಪಿಎಲ್ 2025 ಪ್ಲೇಆಫ್ಗೆ ತಲುಪಲು, ಆರ್ಸಿಬಿ ಉಳಿದ 5 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆಲ್ಲಬೇಕಾಗುತ್ತದೆ. ಸಾಮಾನ್ಯವಾಗಿ, ಪ್ಲೇಆಫ್ನಲ್ಲಿ ಸ್ಥಾನ ಪಡೆಯಲು ಯಾವುದೇ ತಂಡಕ್ಕೆ 16 ಅಂಕಗಳು ಬೇಕಾಗುತ್ತವೆ.
ಅಲ್ಲದೆ, ತಂಡವು ಉತ್ತಮ ನೆಟ್ ರನ್ ರೇಟ್ ಅನ್ನು ಕಾಯ್ದುಕೊಳ್ಳಬೇಕಾಗುತ್ತದೆ. ಹಿಂದಿನ ಆವೃತ್ತಿಗಳಲ್ಲಿ ಅಂತಿಮ ನಾಲ್ಕರಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಎಂಬುದನ್ನು ನಿರ್ಧರಿಸುವಲ್ಲಿ ನೆಟ್ ರನ್ ರೇಟ್ ನಿರ್ಣಾಯಕ ಪಾತ್ರ ವಹಿಸಿದೆ. ಅಂಕಪಟ್ಟಿಯಲ್ಲಿ LSG, MI ಮತ್ತು ಪಿಬಿಕೆಎಸ್ ತಂಡಗಳು ಕೂಡ ಹಿಂದೆಯೇ ಇರುವುದರಿಂದ ಆರ್ಸಿಬಿ ಉತ್ತಮ ನೆಟ್ ರನ್ ರೇಟ್ ಕಾಯ್ದುಕೊಳ್ಳುವುದು ಅಗತ್ಯವಾಗಿದೆ.
ಆರ್ಸಿಬಿಯ ಉಳಿದ ಪಂದ್ಯಗಳು
ಆರ್ಸಿಬಿ ಲೀಗ್ ಹಂತದಲ್ಲಿ ಐದು ಪಂದ್ಯಗಳನ್ನು ಬಾಕಿ ಉಳಿಸಿಕೊಂಡಿದ್ದು, ಮೂರು ಪಂದ್ಯಗಳು ತವರಿನಲ್ಲಿ ಮತ್ತು ಎರಡು ಪಂದ್ಯಗಳನ್ನು ಹೊರಗೆ ಆಡಲಿದೆ. ಏಪ್ರಿಲ್ 27ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದೆಹಲಿಯಲ್ಲಿ ಆಡಲಿದೆ. ಮೇ 3ರಂದು ಬೆಂಗಳೂರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಮೇ 13ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಬೆಂಗಳೂರಿನಲ್ಲೇ ಪಂದ್ಯ ನಡೆಯಲಿದೆ. ಮತ್ತೊಂದು ಮೇ 17ರಂದು ಆರ್ಸಿಬಿ ತವರಿನಲ್ಲೇ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


