ಕ್ರಿಕೆಟ್

ಪಾಕಿಸ್ತಾನದೊಂದಿಗೆ ಎಲ್ಲಾ ಕ್ರಿಕೆಟ್ ಸಂಬಂಧವನ್ನು ಭಾರತ ಕಡಿದುಕೊಳ್ಳಬೇಕು: ಸೌರವ್ ಗಂಗೂಲಿ

ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಬಿಸಿಸಿಐ ಮಾಜಿ ಅಧ್ಯಕ್ಷರು, ಪ್ರತಿ ವರ್ಷವೂ ಭಾರತದ ನೆಲದಲ್ಲಿ ಉಗ್ರರ ಅಟ್ಟಹಾಸ ನಡೆಯುತ್ತಿದ್ದು, ಅದನ್ನು ಇನ್ನು ಮುಂದೆ ಸಹಿಸಬಾರದು ಎಂದರು.

ಪಾಕಿಸ್ತಾನದೊಂದಿಗೆ ಎಲ್ಲಾ ಕ್ರಿಕೆಟ್ ಸಂಬಂಧವನ್ನು ಭಾರತ ಕಡಿದುಕೊಳ್ಳಬೇಕು: ಸೌರವ್ ಗಂಗೂಲಿ
ಸೌರವ್ ಗಂಗೂಲಿ
Published On :

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ಕಳುಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸೌರವ್ ಗಂಗೂಲಿ, ಪಾಕಿಸ್ತಾನದೊಂದಿಗೆ ಭಾರತ ಎಲ್ಲಾ ರೀತಿಯ ಕ್ರಿಕೆಟ್ ಸಂಬಂಧವನ್ನು ಕಡಿದುಕೊಳ್ಳಬೇಕು. ಐಸಿಸಿ ಮತ್ತು ಏಷ್ಯನ್ ಟೂರ್ನಿಗಳಲ್ಲಿಯೂ ಆಡಬಾರದು ಎಂದಿದ್ದಾರೆ.

ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಬಿಸಿಸಿಐ ಮಾಜಿ ಅಧ್ಯಕ್ಷರು, ಪ್ರತಿ ವರ್ಷವೂ ಭಾರತದ ನೆಲದಲ್ಲಿ ಉಗ್ರರ ಅಟ್ಟಹಾಸ ನಡೆಯುತ್ತಿದ್ದು, ಅದನ್ನು ಇನ್ನು ಮುಂದೆ ಸಹಿಸಬಾರದು ಎಂದರು.

ಖಂಡಿತವಾಗಿಯೂ ಭಾರತ ಪಾಕಿಸ್ತಾನ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧವನ್ನು ಕಡಿದುಕೊಳ್ಳಬೇಕು. ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುತ್ತಿರುವುದು ತಮಾಷೆಯಾಗಿ ಮಾರ್ಪಟ್ಟಿದೆ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸ್ಪೋರ್ಟ್ಸ್ ಟುಡೇ ಜೊತೆ ಮಾತನಾಡಿದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಭಾರತದ ನೆಲದಲ್ಲಿ ನಡೆದ ದಾಳಿಯನ್ನು ಖಂಡಿಸಿದರು. ಉಭಯ ದೇಶಗಳ ನಡುವಿನ ಸಂಬಂಧಗಳಲ್ಲಿ ಭಾರತ ಸರ್ಕಾರದ ನಿಲುವಿನಿಂದಾಗಿ ಟೀಂ ಇಂಡಿಯಾ ದ್ವಿಪಕ್ಷೀಯ ಸರಣಿಗಳಲ್ಲಿ ಪಾಕ್ ಜೊತೆಗೆ ಆಡಲ್ಲ ಎಂದರು.

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಆಡಲು ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸಿರಲಿಲ್ಲ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎಲ್ಲಾ ಪಂದ್ಯಗಳನ್ನಾಡಿತ್ತು.

ಉಗ್ರರ ದಾಳಿಯನ್ನು ಖಂಡಿಸುತ್ತೇವೆ. ನಾವು ಸಂತ್ರಸ್ತರ ಜೊತೆಗಿದ್ದೇವೆ. ಸರ್ಕಾರ ಹೇಳಿದಂತೆ ಮಾಡುತ್ತೇವೆ. ಸರ್ಕಾರದ ನಿಲುವಿನಿಂದಾಗಿ ನಾವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿಗಳಲ್ಲಿ ಆಡುವುದಿಲ್ಲ. ಮುಂದೆ ದ್ವಿಪಕ್ಷೀಯ ಪಂದ್ಯಗಳಲ್ಲಿಯೂ ಪಾಕಿಸ್ತಾನದೊಂದಿಗೆ ಆಡುವುದಿಲ್ಲ. ಆದರೆ ಐಸಿಸಿ ಟೂರ್ನಿಗಳ ವಿಚಾರ ಬಂದಾಗ ಐಸಿಸಿ ನಿಯಮಗಳಂತೆ ಆಡುತ್ತೇವೆ. ಆದರೆ, ಏನು ನಡೆಯುತ್ತಿದೆ ಎಂಬುದು ಐಸಿಸಿಗೂ ಅರಿವಿದೆ ಎಂದು ಶುಕ್ಲಾ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.