IPL 2025: DC ವಿರುದ್ಧ ಕೊನೆಗೂ ಸೇಡು ತೀರಿಸಿಕೊಂಡ RCB; 6 ವಿಕೆಟ್ ಭರ್ಜರಿ ಜಯ
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು.

ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.
ಆರ್ ಸಿಬಿ ಪರ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಜೊತೆಯಾಟದ ಮೂಲಕ ತಂಡದ ಗೆಲುವಿಗೆ ಕಾರಣರಾದರು. ಕೃನಾಲ್ ಪಾಂಡ್ಯಾ 47 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 73 ರನ್ ಗಳಿಸಿದರು. ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ ಸಹಿತ 51 ರನ್ ಗಳಿಸಿ ಚಮೀರಾ ಬೌಲಿಂಗ್ ನಲ್ಲಿ ಔಟಾದರು. 4ನೇ ವಿಕೆಟ್ ಗೆ ಆ ಜೋಡಿ ಶತಕದ ಜೊತೆಯಾಟವಾಡಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
ಗೆಲುವಿನ ಜೊತೆಯಾಟ
ಇನ್ನು ಈ ಪಂದ್ಯದಲ್ಲಿ ಆರ್ ಸಿಬಿ ಕೇವಲ 26 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ 4ನೇ ಕ್ರಮಾಂಕಕ್ಕೆ ಬಡ್ತಿ ಪಡೆದು ಬಂದ ಕೃನಾಲ್ ಪಾಂಡ್ಯಾ ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದರೂ ಬಳಿಕ ಕ್ರೀಸ್ ಗೆ ಅಂಟಿಕೊಂಡು ಕ್ರಮೇಣ ಲಯಕಂಡುಕೊಂಡು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಪಾಂಡ್ಯಾ 47 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 73 ರನ್ ಗಳಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ ಸಹಿತ 51 ರನ್ ಗಳಿಸಿ ಗೆಲುವಿಗೆ ಸನಿಹವಾಗಿದ್ದ ಸಂದರ್ಭದಲ್ಲಿ 18ನೇ ಓವರ್ ನಲ್ಲಿ ಚಮೀರಾ ಬೌಲಿಂಗ್ ನಲ್ಲಿ ಔಟಾದರು.
ಬಳಿಕ ಬಂದ ಟಿಮ್ ಡೇವಿಡ್ ಕೇವಲ 5 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಭಾರಿಸಿ ಇನ್ನೂ 1.3 ಓವರ್ ಬಾಕಿ ಇರುವಂತೆಯೇ ಗೆಲುವಿನ ಔಪಚಾರಿಕತೆ ಪೂರ್ಣಗೊಳಿಸಿದರು.
ಆರ್ ಸಿಬಿಗೆ ಆರಂಭಿಕ ಆಘಾತ
ಇನ್ನು ಡೆಲ್ಲಿ ನೀಡಿದ್ದ 163ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಆರಂಭಿಕ ಆಘಾತ ಎದುರಿಸಿತು. ಆರಂಭಿಕರಾಗಿ ಕಣಕ್ಕಿಳಿದ ಜೇಕಬ್ ಬೆಥೆಲ್ 12 ರನ್ ಗಳಿಸಿ ಅಕ್ಸರ್ ಪಟೇಲ್ ಗೆ ವಿಕೆಟ್ ಒಪ್ಪಿಸಿದರು. ಅದೇ ಓವರ್ ನಲ್ಲಿ ದೇವದತ್ ಪಡಿಕ್ಕಲ್ ಕೂಡ ಶೂನ್ಯಕ್ಕೆ ಅಕ್ಸರ್ ಪಟೇಲ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಜತ್ ಪಟಿದಾರ್ 6 ರನ್ ಗಳಿಸಿ ರನೌಟ್ ಗೆ ಬಲಿಯಾದರು. ಕನ್ನಡಿಗ ಕರುಣ್ ನಾಯರ್ ಅದ್ಭುತವಾಗಿ ಚೆಂಡನ್ನು ವಿಕೆಟ್ ಎಸೆದು ಪಟಿದಾರ್ ರನ್ನು ಔಟ್ ಮಾಡಿದರು.
ಉಳಿದಂತೆ ಡೆಲ್ಲಿ ಪರ ಅಕ್ಸರ್ ಪಟೇಲ್ 2 ವಿಕೆಟ್ ಪಡೆದರೆ ಚಮೀರಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



