ಕ್ರಿಕೆಟ್

IPL 2025: DC ವಿರುದ್ಧ ಭರ್ಜರಿ ಗೆಲುವು; RCB ಮತ್ತೆ ಟೇಬಲ್ ಟಾಪರ್

ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

IPL 2025: DC ವಿರುದ್ಧ ಭರ್ಜರಿ ಗೆಲುವು; RCB ಮತ್ತೆ ಟೇಬಲ್ ಟಾಪರ್
ಅಗ್ರಸ್ಥಾನಕ್ಕೇರಿದ ಆರ್ ಸಿಬಿ
Published On :

ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮತ್ತೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ಈ ಮೂಲಕ ಆರ್ ಸಿಬಿ ತನ್ನ ಅಂಕಗಳ ಗಳಿಕೆಯನ್ನು 14ಕ್ಕೆ ಏರಿಸಿಕೊಂಡಿದ್ದು ಮಾತ್ರವಲ್ಲದೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಲಿ ಟೂರ್ನಿಯಲ್ಲಿ ಆರ್ ಸಿಬಿ ಒಟ್ಟು 10 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ.

ಆ ಮೂಲಕ 14 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಅಂತೆಯೇ ಆರ್ ಸಿಬಿ ತನ್ನನೆಟ್ ರನ್ ರೇಟ್ ಅನ್ನೂ ಕೂಡ ಉತ್ತಮಗೊಳಿಸಿಕೊಂಡಿದ್ದು, ಆರ್ ಸಿಬಿ ನೆಟ್ ರನ್ ರೇಟ್ +0.521ಕ್ಕೆ ಏರಿಕೆಯಾಗಿದೆ.

ಉಳಿದಂತೆ ಈ ಪಟ್ಟಿಯಲ್ಲಿ 12 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ 2ನೇ ಸ್ಥಾನದಲ್ಲಿದ್ದು, 8 ಪಂದ್ಯಗಳನ್ನಾಡಿರುವ ಗುಜರಾತ್ 6 ಜಯ ಮತ್ತು 2 ಸೋಲಿನೊಂದಿಗೆ 12 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ.

ಅಂತೆಯೇ ಇಂದಿನ ಪಂದ್ಯದದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿ 2ನೇ ಸ್ಥಾನಕ್ಕೇರಿದ್ದ ಮುಂಬೈ ಇಂಡಿಯನ್ಸ್ ತಂಡ 3ನೇ ಸ್ಥಾನಕ್ಕೆ ಕುಸಿದಿದ್ದು, ಇಂದಿನ ಪಂದ್ಯ ಸೋತ ಡೆಲ್ಲಿ ಕ್ಯಾಪಿಟಲ್ಸ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.

ಉಳಿದಂತೆ ಪಂಜಾಬ್ ಕಿಂಗ್ಸ್ 5, ಎಲ್ ಎಸ್ ಜಿ 6ನೇ ಸ್ಥಾನ, ಕೆಕೆಆರ್ 7 ಮತ್ತು ಎಸ್ ಆರ್ ಹೆಚ್ 8ನೇ ಸ್ಥಾನದಲ್ಲಿವೆ. ರಾಜಸ್ತಾನ ರಾಯಲ್ಸ್ ತಂಡ 9 ಮತ್ತು CSK ಅಂತಿಮ ಸ್ಥಾನದಲ್ಲಿ ಮುಂದುವರೆದಿದೆ.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.