IPL 2025: ಕೆಲವೇ ಗಂಟೆಗಳಲ್ಲಿ Suryakumar Yadav 'ಆರೆಂಜ್ ಕ್ಯಾಪ್' ಕಸಿದ Virat Kohli
ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರನ್ ಮೆಷಿನ್ ವಿರಾಟ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಭರ್ಜರಿ ಬ್ಯಾಟಿಂಗ್ ಮಾಡಿ ಆರೆಂಜ್ ಕ್ಯಾಪ್ ಕೀರ್ತಿಗೆ ಭಾಜನರಾಗಿದ್ದಾರೆ.
ಇಂದು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.
ಈ ಪಂದ್ಯದಲ್ಲಿ ಆರ್ ಸಿಬಿ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮಹತ್ತರ ಪಾತ್ರವಹಿಸಿದರು. ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ ಸಹಿತ 51 ರನ್ ಗಳಿಸಿದರು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 443 ರನ್ ಗಳಿಗೆ ಏರಿಸಿಕೊಂಡರು.
ಅಲ್ಲದೆ ಹಾಲಿ ಟೂರ್ನಿಯಲ್ಲಿ ಗರಿಷ್ಟ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೂ ವಿರಾಟ್ ಕೊಹ್ಲಿ ಭಾಜನರಾದರು. ಆ ಮೂಲಕ ಕೊಹ್ಲಿ ಇದೀಗ ಆರೆಂಜ್ ಕ್ಯಾಪ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂದು ಮಧ್ಯಾಹ್ನವಷ್ಟೇ ಮುಂಬೈ ಇಂಡಿಯನ್ಸ್ ತಂಡ ಸೂರ್ಯ ಕುಮಾರ್ ಯಾದವ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಇದೇ ಪಟ್ಟಿಯ ಅಗ್ರ ಸ್ಥಾನಕ್ಕೇರಿದ್ದರು. ಸೂರ್ಯ ಕುಮಾರ್ ಯಾದವ್ ಇಂದಿನ ಅರ್ಧಶತಕ ಕೂಡ ಸೇರಿದಂತೆ ಹಾಲಿ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 427 ರನ್ ಗಳಿಗೆ ಏರಿಕೆ ಮಾಡಿಕೊಂಡು ಆರೆಂಜ್ ಕ್ಯಾಪ್ ಗೌರವಕ್ಕೆ ಪಾತ್ರರಾಗಿದ್ದರು.
ಆದರೆ ಇದಾದ ಕೆಲವೇ ಗಂಟೆಗಳ ಅವಧಿಯಲ್ಲಿ ವಿರಾಟ್ ಕೊಹ್ಲಿ ಸೂರ್ಯಕುಮಾರ್ ಯಾದವ್ ರಿಂದ ಆರೆಂಜ್ ಕ್ಯಾಪ್ ಕಸಿದಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



