ಪದಗಳಲ್ಲಿ ವರ್ಣಿಸಲು ಅಸಾಧ್ಯ: 14 ವರ್ಷದ ವೈಭವ್ ಸೂರ್ಯವಂಶಿ ಆಟದ ಬಗ್ಗೆ RR ನಾಯಕ ರಿಯಾನ್ ಪರಾಗ್
ವೈಭವ್ ಸೂರ್ಯವಂಶಿಯವರ ಬ್ಯಾಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ರಿಯಾನ್ ಪರಾಗ್, ಇದೊಂದು ಅದ್ಭುತ ಅದ್ವಿತೀಯ. ನಾವು ಎರಡು ತಿಂಗಳು ಆತನ ಜೊತೆಗೆ ಕಳೆದಿದ್ದೆವು.

ಜೈಪುರ: ಐಪಿಎಲ್ ಟೂರ್ನಿಯಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಪ್ರಬಲ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗುಜರಾತ್ ವಿರುದ್ಧದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರು.
ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲೇ ದಾಖಲೆಯ ಶತಕ ಸಿಡಿಸಿದರು.
ವೈಭವ್ ಸೂರ್ಯವಂಶಿಯವರ ಬ್ಯಾಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ರಿಯಾನ್ ಪರಾಗ್, ಇದೊಂದು ಅದ್ಭುತ ಅದ್ವಿತೀಯ. ನಾವು ಎರಡು ತಿಂಗಳು ಆತನ ಜೊತೆಗೆ ಕಳೆದಿದ್ದೆವು. ಆತನ ಬಗ್ಗೆ ವಿಶ್ವಾಸವಿತ್ತು. ಆದರೆ ಇಂದು ವಿಶ್ವದರ್ಜೆಯ ಬೌಲರ್ ಗಳ ವಿರುದ್ಧ ತೋರಿಸಿದ ಅದ್ಭುತ ಪ್ರದರ್ಶನವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದರು.
ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಓಪನರ್ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅತ್ಯಮೂಲ್ಯವಾದ ಸೆಂಚುರಿ ಬಾರಿಸುವ ಮೂಲಕ ಆರ್ಆರ್ ಸುಲಭ ಜಯಗಳಿಸಿದೆ. ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿನ ಪ್ಲೇಯರ್ ಒಬ್ಬರು ಶತಕ ಬಾರಿಸಿರುವುದು ದಾಖಲೆ ಪಟ್ಟಿಗೆ ಸೇರಿದೆ.
15.5 ಓವರ್ ಗಳಲ್ಲಿ 210 ರನ್ ಗಳನ್ನು ತಂಡ ಬೆನ್ನಟ್ಟಿದರೂ ಕೂಡ ಬಹಳ ಬೇಗನೆ ಆಟ ಮುಗಿಸುವ ಪ್ರಯತ್ನದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




