ಸಾನಿಯಾ ಜೊತೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ: ಯಾರೀ ಹುಡುಗಿ?
ಈ ನಿಶ್ಚಿತಾರ್ಥ ಕಾರ್ಯಕ್ರಮ ರಹಸ್ಯವಾಗಿ ನಡೆದಿದ್ದು, ಸರಳವಾಗಿ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ಎರಡೂ ಕುಟುಂಬದ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ತಿಳಿದುಬಂದಿದೆ.

ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ನಿಶ್ಚಿತಾರ್ಥ ನಡೆದಿದೆ ಎಂದು ತಿಳಿದುಬಂದಿದೆ.
25 ವರ್ಷಕ್ಕೆ ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಬಾಲ್ಯದ ಗೆಳತಿ ಸಾನಿಯಾ ಚಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ನಿಶ್ಚಿತಾರ್ಥ ಕಾರ್ಯಕ್ರಮ ರಹಸ್ಯವಾಗಿ ನಡೆದಿದ್ದು, ಸರಳವಾಗಿ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ಎರಡೂ ಕುಟುಂಬದ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಈ ಕುರಿತ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಫೋಟೋಗಳು ವೈರಲ್ ಆಗಿವೆ.
ಆದರೆ, ನಿಶ್ಚಿತಾರ್ಥದ ಬಗ್ಗೆ ಎರಡೂ ಕುಟುಂಬಗಳಿಂದ ಇನ್ನು ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಅಲ್ಲದೆ, ಅರ್ಜುನ್ ತೆಂಡೂಲ್ಕರ್ ಸಹ ಈ ಬಗ್ಗೆ ತನ್ನ ಯಾವುದೇ ಪೋಸ್ಟ್'ಗಳನ್ನು ಮಾಡಿಲ್ಲ.
ಅರ್ಜುನ್ ಅವರ ಭಾವಿ ಪತ್ನಿ ಸಾನಿಯಾ ಚಂದೋಕ್ ಮುಂಬೈನ ದೊಡ್ಡ ಕುಟುಂಬಕ್ಕೆ ಸೇರಿದವರು. ಸಾನಿಯಾ ಹೈ ಪ್ರೋಫೈಲ್ ಕುಟುಂಬದವರಾದರೂ ಸಾಮಾನ್ಯ ಜನರಂತೆ ಇದ್ದಾರೆ. ಇವರು ಮುಂಬೈನ ಪ್ರಸಿದ್ಧ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಘಾಯ್ ಇಂಟರ್ ಕಾಂಟಿನೆಂಟಲ್ ಮೆರೈನ್ ಡ್ರೈವ್ ಹೋಟೆಲ್ ಮತ್ತು ಬ್ರೂಕ್ಲಿನ್ ಕ್ರೀಮರಿಗಳ ಮಾಲೀಕರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



