ಕ್ರಿಕೆಟ್

3rd T20: ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ; ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ!

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 7 ವಿಕೆಟ್‌ಗಳಿಂದ ಸೋಲಿಸಿತು. ಭಾರತವು 15.5 ಓವರ್‌ಗಳಲ್ಲಿ ಮೂರು ವಿಕೆಟ್‌ಗಳಿಗೆ 118 ರನ್‌ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.

3rd T20: ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ; ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ!
ಟೀಂ ಇಂಡಿಯಾ
Published On :

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 7 ವಿಕೆಟ್‌ಗಳಿಂದ ಸೋಲಿಸಿತು. ಭಾರತವು 15.5 ಓವರ್‌ಗಳಲ್ಲಿ ಮೂರು ವಿಕೆಟ್‌ಗಳಿಗೆ 118 ರನ್‌ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. ಶಿವಂ ದುಬೆ ಸತತ ಎರಡು ಬೌಂಡರಿಗಳನ್ನು ಬಾರಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ನಾಯಕ ಸೂರ್ಯಕುಮಾರ್ ಯಾದವ್ 12, ಅಭಿಷೇಕ್ ಶರ್ಮಾ 35 ಮತ್ತು ಶುಭ್‌ಮನ್ ಗಿಲ್ 28 ರನ್ ಗಳಿಸಿದರು.

ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಕೇವಲ ಏಳು ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 117 ರನ್‌ಗಳಿಗೆ ಆಲೌಟ್ ಆಯಿತು. ಕ್ವಿಂಟನ್ ಡಿ ಕಾಕ್ ಒಂದು ರನ್‌ಗೆ, ರೀಜಾ ಹೆಂಡ್ರಿಕ್ಸ್ ಶೂನ್ಯಕ್ಕೆ ಮತ್ತು ಡೆವಾಲ್ಡ್ ಬ್ರೆವಿಸ್ ಎರಡು ರನ್‌ಗಳಿಗೆ ಔಟಾದರು.

ಐಡೆನ್ ಮಾರ್ಕ್ರಾಮ್ 46 ಎಸೆತಗಳಲ್ಲಿ 61 ರನ್‌ ಗಳಿತ ತಂಡ ಮೊತ್ತ 100 ಗಡಿ ದಾಟಲು ನೆರವಾಯಿತು. ಡೊನವನ್ ಫೆರೇರಾ ಕೂಡ 20 ರನ್ ಗಳ ಕೊಡುಗೆ ನೀಡಿದರು. ಭಾರತದ ಪರ ಅರ್ಶ್ದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ, ಭಾರತದ ಆರಂಭಿಕರು ಸ್ಫೋಟಕ ಆರಂಭ ನೀಡಿದರು. ಅಭಿಷೇಕ್-ಗಿಲ್ ಜೋಡಿ 31 ಎಸೆತಗಳಲ್ಲಿ 68 ರನ್ ಗಳ ಜೊತೆಯಾಟವಾಡಿತು. ಅಭಿಷೇಕ್ ಔಟಾದ ನಂತರ (18 ಎಸೆತಗಳಲ್ಲಿ 35) ತಂಡಕ್ಕೆ ಬಂದ ತಿಲಕ್ ವರ್ಮಾ ಮತ್ತೆ ಭಾರತವನ್ನು ಗೆಲುವಿನತ್ತ ಕೊಂಡೊಯ್ದಿದ್ದು 26 ರನ್ ಗಳಿಸಿದರು.

5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿದ್ದು, ಮೂರನೇ ಪಂದ್ಯ ಭಾರತ ಗೆದ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.