ಐಪಿಎಲ್ ಆರಂಭಕ್ಕೂ ಮುನ್ನವೇ RCBಗೆ ಆಘಾತ: ತಂಡದ ಸ್ಟಾರ್ ಆಲ್ರೌಂಡರ್ ಗಾಯ, ಟೂರ್ನಿ ಆಡೋದೇ ಡೌಟ್!
2025ರ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಪ್ರಶಸ್ತಿ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಆಸ್ಟ್ರೇಲಿಯಾದ ಆಲ್ರೌಂಡರ್ ಟಿಮ್ ಡೇವಿಡ್ ಗಾಯಗೊಂಡಿದ್ದು, ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದು ಹೇಳಲಾಗುತ್ತಿದೆ.
ನವದೆಹಲಿ: ಐಪಿಎಲ್ 2026ಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಇದರ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರೂ ತಂಡದ ಸ್ಟಾರ್ ಆಟಗಾರ ಟೂರ್ನಿಯಲ್ಲಿ ಪಾಲ್ಗೊಳ್ಳುವುದೇ ಅನುಮಾನ ಎನ್ನಲಾಗುತ್ತಿದೆ.
ಹೌದು.. 2025ರ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಪ್ರಶಸ್ತಿ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಆಸ್ಟ್ರೇಲಿಯಾದ ಆಲ್ರೌಂಡರ್ ಟಿಮ್ ಡೇವಿಡ್ ಗಾಯಗೊಂಡಿದ್ದು, ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದು ಹೇಳಲಾಗುತ್ತಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ.
ಆರ್ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್ನ 12ನೇ ಪಂದ್ಯದಲ್ಲಿ ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದಾರೆ. ಈ ಗಾಯದ ಕಾರಣ ಟಿಮ್ ಡೇವಿಡ್ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಪೆವಿಲಿಯನ್ಗೆ ಮರಳಿದ್ದಾರೆ.
ಪ್ರಸ್ತುತ ಮಾಹಿತಿ ಪ್ರಕಾರ ಟಿಮ್ ಡೇವಿಡ್ ಅವರ ಗಾಯವು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಟಿಮ್ ಡೇವಿಡ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವುದು ಅನುಮಾನ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.
ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಿಂದ ಟಿಮ್ ಡೇವಿಡ್ ಹೊರಗುಳಿದರೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಐಪಿಎಲ್ 2026 ಮಾರ್ಚ್ 26 ರಿಂದ ಆರಂಭವಾಗಲಿದೆ.
ಅತ್ತ ಟಿ20 ವಿಶ್ವಕಪ್ನಿಂದ ಟಿಮ್ ಡೇವಿಡ್ ಹೊರಗುಳಿದರೆ ಮಾರ್ಚ್ನಲ್ಲಿ ಆರಂಭವಾಗಲಿರುವ ಐಪಿಎಲ್ನಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


