1st ODI: Shreyas Iyer ಭರ್ಜರಿ ಕಮ್ ಬ್ಯಾಕ್, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಗೆ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ ಸಿಡಿಸುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಹೌದು.. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು. ನಾಗ್ಪುರ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 36 ಎಸೆತಗಳಲ್ಲಿ 163.89 ಸ್ಟ್ರೈಕ್ ರೇಟ್‌ನಲ್ಲಿ 59 ರನ್ ಗಳಿಸಿ ಔಟಾದರು. ಅವರ ಈ ಭರ್ಜರಿ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು.
ದಾಖಲೆಯ ಅರ್ಧಶತಕ
ಇನ್ನು ಇದೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಆ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 2ನೇ ವೇಗದ ಅರ್ಧಶತಕ ಗಳಿಸಿದರು. ಈ ಹಿಂದೆ ಶ್ರೇಯಸ್ ಅಯ್ಯರ್ 2019ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಪಂದ್ಯದಲ್ಲಿ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆ ಮೂಲಕ ಇಂದು ತಮ್ಮ 2ನೇ ವೇಗದ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು.
ಇನ್ನು ಈ ಪಂದ್ಯದಲ್ಲಿ ಭಾರತದ ಪರ ಅಕ್ಸರ್ ಪಟೇಲ್ ಕೂಡ ಅರ್ಧಶತಕ ಸಿಡಿಸಿ ಶ್ರೇಯಸ್ ಅಯ್ಯರ್ ಗೆ ಉತ್ತಮ ಸಾಥ್ ನೀಡಿದರು. ಅಕ್ಸರ್ ಪಟೇಲ್ ಒಟ್ಟು 47 ಎಸೆತಗಳನ್ನು ಎದುರಿಸಿ 1 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 110.64 ಸ್ಟ್ರೈಕ್ ರೇಟ್ ನಲ್ಲಿ 52 ರನ್ ಕಲೆಹಾಕಿದರು.

1st ODI: ಇಂಗ್ಲೆಂಡ್ ವಿರುದ್ಧ ಅದ್ಭುತ ಬೌಲಿಂಗ್, Ravindra Jadeja ದಾಖಲೆ; James Anderson ರೆಕಾರ್ಡ್ ಧೂಳಿಪಟ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


