1st ODI: ಇಂಗ್ಲೆಂಡ್ ವಿರುದ್ಧ ಅದ್ಭುತ ಬೌಲಿಂಗ್, Ravindra Jadeja ದಾಖಲೆ; James Anderson ರೆಕಾರ್ಡ್ ಧೂಳಿಪಟ
ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್‌ಗಳಿಗೆ ಆಲೌಟ್ ಮಾಡಿತು.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕ ಹಿನ್ನಡೆ ಹೊರತಾಗಿಯೂ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ರವೀಂದ್ರ ಜಡೇಜಾ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
ಹೌದು.. ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್‌ಗಳಿಗೆ ಆಲೌಟ್ ಮಾಡಿತು. ರವೀಂದ್ರ ಜಡೇಜಾ (26ಕ್ಕೆ 3) ಮತ್ತು ಹರ್ಷಿತ್ ರಾಣಾ (53ಕ್ಕೆ 3) ತಲಾ ಮೂರು ವಿಕೆಟ್ ಕಬಳಿಸಿ ಭಾರತ ಮೇಲುಗೈ ಸಾಧಿಸುವಂತೆ ಮಾಡಿದರು.
ಅಂತೆಯೇ ಇಂಗ್ಲೆಂಡ್ ಪರ ಜೋಸ್ ಬಟ್ಲರ್ ಮತ್ತು ಜಾಕೋಬ್ ಬೆಥೆಲ್ ಅರ್ಧಶತಕ ಗಳಸಿ ಮಿಂಚಿದರೂ, ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲವಾಯಿತು. ಈ ಜೋಡಿ ಐದನೇ ವಿಕೆಟ್‌ಗೆ 59 ರನ್‌ಗಳ ನಿರ್ಣಾಯಕ ಜೊತೆಯಾಟವನ್ನು ನೀಡಿತು.
ಜಾಸ್ ಬಟ್ಲರ್ 67 ಎಸೆತಗಳಲ್ಲಿ 52 ರನ್ ಗಳಿಸಿದರೆ, ಬೆಥೆಲ್ 64 ಎಸೆತಗಳಲ್ಲಿ 51 ರನ್ ಗಳಿಸಿದರು. ಅಂತೆಯೇ ಆರಂಭಿಕರಾದ ಫಿಲಿಪ್ ಸಾಲ್ಟ್ ಮತ್ತು ಬೆನ್ ಡಕೆಟ್ ಇಂಗ್ಲೆಂಡ್‌ಗೆ ಅದ್ಭುತ ಆರಂಭವನ್ನು ನೀಡಿದರು. ಆದರೆ ಅದೇ ರೀತಿಯ ಬ್ಯಾಟಿಂಗ್ ಪ್ರದರ್ಶನ ಇಂಗ್ಲೆಂಡ್ ತಂಡದ ಕೆಳ ಕ್ರಮಾಂಕದ ಇತರೆ ಆಟಗಾರರಿಂದ ಮೂಡಿಬರಲಿಲ್ಲ.
ರವೀಂದ್ರ ಜಡೇಜಾ ದಾಖಲೆ
ಏತನ್ಮಧ್ಯೆ, ಇನ್ನಿಂಗ್ಸ್ ನ ಅಂತಿಮ ಹಂತದಲ್ಲಿ ಇಂಗ್ಲೆಂಡ್ ದಾಂಡಿಗರನ್ನು ಇನ್ನಿಲ್ಲದಂತೆ ಕಾಡಿದ ರವೀಂದ್ರ ಜಡೇಜಾ ಕೇವಲ 26ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದರು. ಅಂತೆಯೇ ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 42ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಭಾರತ vs ಇಂಗ್ಲೆಂಡ್ ಏಕದಿನ ಪಂದ್ಯಗಳಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದ ಜೇಮ್ಸ್ ಆ್ಯಂಡರ್ಸನ್ ದಾಖಲೆಯನ್ನು ರವೀಂದ್ರ ಜಡೇಜಾ ಮುರಿದರು. ಆ್ಯಂಡರ್ಸನ್ ಒಟ್ಟು 40 ವಿಕೆಟ್ ಗಳಿಸಿ ಇಷ್ಟು ದಿನ ಅಗ್ರ ಸ್ಥಾನದಲ್ಲಿದ್ದರು. ಇದೀಗ ರವೀಂದ್ರ ಜಡೇಜಾ 42 ವಿಕೆಟ್ ಗಳೊಂದಿಗೆ ಅಗ್ರ ಸ್ಥಾನಕ್ಕೇರಿದ್ದಾರೆ.

Ind vs Eng; ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ODIಗೆ ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ ಪದಾರ್ಪಣೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



