WPL 2025: RCB ಸ್ಟಾರ್ ಸ್ಪಿನ್ನರ್ Shreyanka Patil ಸರಣಿಯಿಂದಲೇ ಔಟ್, ಆಲ್ರೌಂಡರ್ ಎಂಟ್ರಿ!
ಈ ವರೆಗೂ ಆರ್ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ ಬೌಲಿಂಗ್ನಲ್ಲಿ 19 ವಿಕೆಟ್ ಕಬಳಿಸಿ, ಬ್ಯಾಟ್ ಮೂಲಕ 81 ರನ್ ಕಲೆಹಾಕಿದ್ದಾರೆ.

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) 2025ರಲ್ಲಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಆರಂಭದಲ್ಲೇ ಭಾರಿ ಆಘಾತ ಎದುರಾಗಿದ್ದು ತಂಡದ ಸ್ಟಾರ್ ಆಟಗಾರ್ತಿ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ದೂರ ಉಳಿಯುವಂತಾಗಿದೆ.
ಹೌದು.. ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇದೀಗ ಇಡೀ ಟೂರ್ನಿಗೆ ಅಲಭ್ಯರಾಗಿದ್ದಾರೆ. ಈ ವರೆಗೂ ಆರ್ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ ಬೌಲಿಂಗ್ನಲ್ಲಿ 19 ವಿಕೆಟ್ ಕಬಳಿಸಿ, ಬ್ಯಾಟ್ ಮೂಲಕ 81 ರನ್ ಕಲೆಹಾಕಿದ್ದಾರೆ. ಕಳೆದ ಬಾರಿ ಆರ್ಸಿಬಿ ತಂಡ ಕಪ್ ಗೆಲ್ಲುವಲ್ಲಿ ಕನ್ನಡತಿ ಶ್ರೇಯಾಂಕಾ ಕೊಡುಗೆ ಅಮೂಲ್ಯವಾಗಿತ್ತು. ಆದರೆ ಈ ಬಾರಿ ಶ್ರೇಯಾಂಕಾ ಪಾಟೀಲ್ ತಂಡದ ದೂರ ಉಳಿಯುವಂತಾಗಿದೆ.
ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯೆಯಾಗಿರುವ ಶ್ರೇಯಾಂಕಾ ಪಾಟೀಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಕ್ಕೆ ಕಾರಣ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಈ ಗಾಯದ ಸಮಸ್ಯೆಯ ಕಾರಣ ಅವರು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಶ್ರೇಯಾಂಕಾ ಪಾಟೀಲ್ 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅಲ್ಲದೆ ಆಸ್ಟ್ರೇಲಿಯಾ ಪ್ರವಾಸ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಿಂದಲೂ ಹೊರಗುಳಿದಿದ್ದರು. ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ ನಿಂದಲೂ ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಆಲ್ರೌಂಡರ್ ಎಂಟ್ರಿ!
ಗಾಯಾಳು ಶ್ರೇಯಾಂಕಾ ಪಾಟೀಲ್ ಗೆ ಪರ್ಯಾಯವಾಗಿ ಆರ್ ಸಿಬಿ ಫ್ರಾಂಚೈಸಿ ಪ್ರಮುಖ ಆಲ್ರೌಂಡರ್ ಅನ್ನೇ ಕಣಕ್ಕಿಳಿಸುತ್ತಿದ್ದು, ಅನುಭವಿ ಆಲ್ರೌಂಡರ್ ಸ್ನೇಹ್ ರಾಣಾ ಅವರನ್ನು ಆಯ್ಕೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಕಳೆದ ಸೀಸನ್ನಲ್ಲಿ ಗುಜರಾತ್ ಜೈಂಟ್ಸ್ ಪರ ಆಡಿದ್ದ ಸ್ನೇಹ್ ರಾಣಾ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಆರ್ಸಿಬಿ ತಂಡದ ಮೊದಲ ಪಂದ್ಯದ ವೇಳೆ ಸ್ನೇಹ್ ರಾಣಾ ಡಗೌಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಶ್ರೇಯಾಂಕಾ ಬದಲಿಯಾಗಿ ಸ್ನೇಹ್ ಆರ್ಸಿಬಿ ತಂಡಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



