Champions Trophy 2025: ಉದ್ಘಾಟನಾ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ನ್ಯೂಜಿಲ್ಯಾಂಡ್ ವಿರುದ್ಧ 60 ರನ್ ಸೋಲು!
29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಸೋಲಿನ ರುಚಿ ತೋರಿಸಿದೆ.

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಚಾಂಪಿಯನ್ಸ್ ಟ್ರೋಫಿ ಆರಂಭವಾಗಿದೆ. 29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಸೋಲಿನ ರುಚಿ ತೋರಿಸಿದೆ.
ನ್ಯೂಜಿಲ್ಯಾಂಡ್ ನೀಡಿದ 321 ರನ್ ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನಕ್ಕೆ ಆರಂಭಿಕ ಹಿನ್ನಡೆಯಾಯಿತು. 6 ರನ್ ಗಳಿಸಿದ್ದ ಸೌದ್ ಶಕೀಲ್ ಮತ್ತು 3 ರನ್ ಗಳಿಸಿದ್ದ ಮೊಹಮ್ಮದ್ ರಿಜ್ವಾನ್ ಒ'ರೂರ್ಕ್ ಎಸೆತದಲ್ಲಿ ಓಟಾಗಿ ಪೆವಿಲಿಯನ್ ಸೇರಿದರು. ನಂತರ ಫಖರ್ ಜಮಾನ್ 24 ರನ್ ಗಳಿಸಿ ಔಟಾದರೆ, ಸಲ್ಮಾನ್ ಆಘ್ ಸ್ಫೋಟಕ ಬ್ಯಾಟಿಂಗ್ ಮಾಡಿ 28 ಎಸೆತಗಳಲ್ಲಿ 42 ರನ್ ಸಿಡಿಸಿ ಔಟಾದರು. ಬಾಬರ್ ಅಜಂ ತಾಳ್ಮೆಯ ಆಟವಾಡಿದರೂ ಸಹ ಬ್ಯಾಟರ್ ಗಳು ಸಪೋರ್ಟ್ ಮಾಡಲಿಲ್ಲ. ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿದರು. ಅಂತಿಮವಾಗಿ ಪಾಕಿಸ್ತಾನ 260 ರನ್ ಗೆ ಆಲೌಟ್ ಆಗಿದ್ದು 60 ರನ್ ಗಳಿಂದ ಸೋಲು ಕಂಡಿದೆ.
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿಯೇ 2 ಶತಕಗಳು ದಾಖಲಾಗಿವೆ. ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್ನ ಆರಂಭಿಕ ಆಟಗಾರರಾದ ವಿಲ್ ಯಂಗ್ ಮತ್ತು ಟಾಮ್ ಲ್ಯಾಥಮ್ ಶತಕಗಳನ್ನು ಗಳಿಸಿದ್ದಾರೆ. ವಿಲ್ ಯಂಗ್ 107 ಮತ್ತು ಟಾಮ್ ಲ್ಯಾಥಮ್ ಅಜೇಯ 118 ರನ್ ಗಳಿಸಿದರು. ಇಬ್ಬರ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ 50 ಓವರ್ಗಳಲ್ಲಿ 5 ವಿಕೆಟ್ಗೆ 320 ರನ್ ಗಳಿಸಿತು. ಇದಲ್ಲದೆ, ಗ್ಲೆನ್ ಫಿಲಿಪ್ಸ್ 39 ಎಸೆತಗಳಲ್ಲಿ 61 ರನ್ ಗಳಿಸಿದರು. ಪಾಕಿಸ್ತಾನ ಪರ ಹ್ಯಾರಿಸ್ ರೌಫ್ ಮತ್ತು ನಸೀಮ್ ಶಾ ತಲಾ 2 ವಿಕೆಟ್ ಪಡೆದರು. ಆದರೆ ರೌಫ್ 83 ರನ್ ದುಬಾರಿ ಬೌಲರ್ ಎನಿಸಿಕೊಂಡರು. ಅಬ್ರಾರ್ ಅಹ್ಮದ್ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



